ಕಂಪ್ಯೂಟರ್ ಜ್ಞಾನ ಅವಶ್ಯಕ

New Sankanoor New
Published on

ಹುಬ್ಬಳ್ಳಿ : ಇಂದಿನ ದಿನಗಳಲ್ಲಿ ಕಂಪ್ಯೂಟರ್ ಜ್ಞಾನದ ಅವಶ್ಯಕತೆ ಅತಿ ಹೆಚ್ಚು ಇದೆ. ಇದರ ಬಗ್ಗೆ ಜ್ಞಾನ ಇರದಿದ್ದರೆ ಅನಕ್ಷರಸ್ಥರೆಂದೇ ಭಾವಿಸುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಹೇಳಿದ್ದಾರೆ.

ನವನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ಆಯೋಜಿಸಿದ್ದ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಮತ್ತು ಕಂಪ್ಯೂಟರ್ ಕೊಠಡಿ ಉದ್ಘಾಟಿಸಿ ಅವರು ಮಾತನಾಡಿದರು. ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳತ್ತಲೂ ವಿದ್ಯಾರ್ಥಿಗಳು ಗಮನ ಹರಿಸಬೇಕು. ಈ ನಿಟ್ಟಿನಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಬೇಕು. ಪಿಯುಸಿ ಫಲಿತಾಂಶ ಉತ್ತಮವಾಗಿ ಬರಲು ವಿದ್ಯಾರ್ಥಿಗಳೊಂದಿಗೆ ಶಿಕ್ಷಕರು ಸಹ ಶ್ರಮಿಸಬೇಕು ಎಂದು ಸಲಹೆ ನೀಡಿದರು.

ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೆ.ಪಿ. ಸುರೇಶ, ಪಾಲಿಕೆ ಸದಸ್ಯೆ ಸುನಿತಾ ಮಾಳೋದಕರ, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಅಜ್ಜಪ್ಪ ಹೊರಕೇರಿ, ದಾನಿ ವೀರೇಶ ಶಾಸ್ತ್ರಿಮಠ ದಂಪತಿಗಳು ಮತ್ತು ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು ಅತಿಥಿಗಳಾಗಿದ್ದರು. ಪ್ರಾಚಾರ್ಯರಾಗಿ ಬಡ್ತಿ ಹೊಂದಿದ ಸಂಜೀವಕುಮಾರ ಬಿ., ವರ್ಗಾವಣೆೆಗೊಂಡ ಸುಪ್ರಿಯ ಕಟಗಿ, ಮತ್ತು ಎಂ.ಬಿ. ಕಂಬಳಿ ಅವರನ್ನು ಸನ್ಮಾನಿಸಲಾಯಿತು.

ಪ್ರಾಚಾರ್ಯ ಅಶೋಕ ಸವಣೂರ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ಒಕ್ಕೂಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಬಿ ವಿ. ಮಡಿವಾಳ ಪ್ರಮಾಣವಚನ ಬೋಧಿಸಿದರು. ಎಸ್.ಬಿ. ವಸ್ತ್ರಮಠ ನಿರೂಪಿಸಿದರು. ವಿ.ಸಿ. ಪಟ್ಟಣಶೆಟ್ಟಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net