ಬಂಡಳ್ಳಿ ಸರ್ಕಾರಿ ಶಾಲೆಗೆ ಕಂಪ್ಯೂಟರ್, ಪ್ರೊಜೆಕ್ಟರ್ ಕೊಡುಗೆ

ಬಂಡಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳು ಕಂಪ್ಯೂಟರ್ ಕಲಿಕೆಯಲ್ಲಿ ತೊಡಗಿರುವುದು.
ಬಂಡಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳು ಕಂಪ್ಯೂಟರ್ ಕಲಿಕೆಯಲ್ಲಿ ತೊಡಗಿರುವುದು.
Published on

ಹನೂರು: ಶೈಕ್ಷಣಿಕ ವಲಯ ವ್ಯಾಪ್ತಿಯ ಬಂಡಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮಂಗಳವಾರ ಹೆಲ್ಪ್ ಎಜ್ಯುಕೇಟ್ ಎ ಚೈಲ್ಡ್ ಸಂಸ್ಥೆ ವತಿಯಿಂದ 5 ಕಂಪ್ಯೂಟರ್, ಪ್ರೊಜೆಕ್ಟರ್ ಹಾಗೂ ಅಗತ್ಯ ಪರಿಕರಗಳನ್ನು ಕೊಡುಗೆಯಾಗಿ ನೀಡಲಾಯಿತು.

ಮುಖ್ಯಶಿಕ್ಷಕ ಗುರುಸ್ವಾಮಿ ಮಾತನಾಡಿ, ಈ ಸಂಸ್ಥೆ ಹಲವು ವರ್ಷಗಳಿಂದ ಈ ಭಾಗದ ಮಕ್ಕಳಿಗೆ ಶಾಲಾ ಕಟ್ಟಡ, ಸಮವಸ್ತ್ರ, ಕಲಿಕಾ ಸಾಮಗ್ರಿ ಹಾಗೂ ಇತರ ಸವಲತ್ತುಗಳನ್ನು ಒದಗಿಸುತ್ತಿದ್ದು, ಬಡ ಮಕ್ಕಳ ಶಿಕ್ಷಣಕ್ಕೆ ಆಶಾಕಿರಣವಾಗಿ ಕಾರ್ಯನಿರ್ವಹಿಸುತ್ತಿದೆ. ಹೀಗಿರುವಾಗ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲೇ ಹೆಚ್ಚು ದಾಖಲಾತಿ ಹೊಂದಿರುವ ನಮ್ಮ ಶಾಲೆ ಮಕ್ಕಳಿಗೆ ಕಂಪ್ಯೂಟರ್ ಶಿಕ್ಷಣವನ್ನು ನೀಡುವುದಾಗಿ ಪಾಲಕರಿಗೆ ಭರವಸೆ ನೀಡಲಾಗಿತ್ತು. ಆದರೆ ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಕಂಪ್ಯೂಟರ್ ಇರಲಿಲ್ಲ.

ಈ ಬಗ್ಗೆ ಸಂಸ್ಥೆಯ ಗಮನಕ್ಕೆ ತರಲಾಗಿತ್ತು. ಶಾಲೆಯ ಅಭಿವೃದ್ಧಿ ಹಾಗೂ ಶಿಕ್ಷಕರ ಕಾಳಜಿಯನ್ನು ಮನಗಂಡ ಸಂಸ್ಥೆ ಕಂಪ್ಯೂಟರ್, ಪ್ರೊಜೆಕ್ಟರ್ ಹಾಗೂ ಅಗತ್ಯ ಪರಿಕರಗಳನ್ನು ನೀಡಿದ್ದು, ಮಕ್ಕಳ ಶಿಕ್ಷಣಕ್ಕೆ ಸಹಕಾರಿಯಾಗಿದೆ. ಪ್ರತಿಯೊಬ್ಬರೂ ಇದರ ಪ್ರಯೋಜನ ಪಡೆದು ಕಂಪ್ಯೂಟರ್ ಜ್ಞಾನ ಹೊಂದಬೇಕು ಎಂದು ತಿಳಿಸಿದರು.

ಸಂಸ್ಥೆಯ ನಂದಾ, ರವಿ, ಎಸ್‌ಡಿಎಂಸಿ ಅಧ್ಯಕ್ಷೆ ಪುಟ್ಟದೇವಮ್ಮ, ಶಿಕ್ಷಕರಾದ ಮಾಲತಿ, ಸುನೀತಾ, ಜವೇರಿಯ ಅತ್ತರ್, ರಶ್ಮಿ, ಶ್ವೇತಾ, ಪ್ರಿಯದರ್ಶಿನಿ, ರೂಪಾದೇವಿ, ಜಾನ್ಸಿ ಮೆಟಲ್, ಪ್ರದೀಪ್‌ಕುಮಾರ್, ಪುಟ್ಟಸ್ವಾಮಿ, ಜನಾರ್ಧನ್, ಸಿದ್ದರಾಜು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net