

ಹಗರಿಬೊಮ್ಮನಹಳ್ಳಿ: ಪ್ರತಿಯೊಬ್ಬರಿಗೂ ಕಂಪ್ಯೂಟರ್ ಜ್ಞಾನ ಅತ್ಯಂತ ಅವಶ್ಯವಾಗಿದೆ ಎಂದು ಎಸ್‌ಎಲ್‌ಆರ್ ಮೆಟಾಲಿಕ್ಸ್ ಐಟಿ ವಿಭಾಗದ ಮುಖ್ಯಸ್ಥ ದತ್ತಾತ್ರೇಯ ಅಭಿಪ್ರಾಯಪಟ್ಟರು.
ವರದಾಪುರ ಗ್ರಾಮದಲ್ಲಿ ಎಸ್‌ಎಲ್‌ಆರ್ ಮೆಟಾಲಿಕ್ಸ್ ಹಾಗೂ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜುಕೇಷನಲ್ ಟ್ರಸ್ಟ್ ಆಯೋಜಿಸಿದ್ದ ಉಚಿತ ಕಂಪ್ಯೂಟರ್ ತರಬೇತಿ ಶಿಬಿರ ಬುಧವಾರ ಉದ್ಘಾಟಿಸಿ ಮಾತನಾಡಿದರು.
ಗ್ರಾಮೀಣ ಯುವಜನತೆಗೆ ಕಂಪ್ಯೂಟರ್ ಜ್ಞಾನ ಅವಶ್ಯಕವಾಗಿದೆ. ಆದ್ದರಿಂದ ಶಿಬಿರವನ್ನು ಸಮರ್ಪಕವಾಗಿ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಮುಖಂಡ ಹುಸೇನ್ ಪೀರಾ ಮಾತನಾಡಿ, ಗ್ರಾಮದ ಯುವಕ-ಯುವತಿಯರು ಕಂಪ್ಯೂಟರ್ ಶಿಕ್ಷಣಕ್ಕಾಗಿ ಪಟ್ಟಣ ನಗರ ಪ್ರದೇಶಗಳನ್ನು ಅವಲಂಬಿಸಬೇಕಾಗಿದೆ. ಈಗ ಎಸ್‌ಎಲ್‌ಆರ್ ಕಂಪನಿಯಿಂದ ಆಯೋಜಿಸಿರುವ ಉಚಿತ ಶಿಬಿರ ಕಂಪ್ಯೂಟರ್ ಕಲಿಕೆಗೆ ಅನುಕೂಲವಾಗಲಿದೆ ಎಂದರು.