ಚೆಸ್ ಆಟಕ್ಕೆ ಅಗತ್ಯ ಏಕಾಗ್ರತೆ: ಚಕ್ರಪಾಣಿ ಬಾಕಿಲ ಅನಿಸಿಕೆ

Kdb_Chess-Game
Published on

ಕಡಬ: ಆಲಂಕಾರು ಶ್ರೀ ಭಾರತಿ ವಿದ್ಯಾಸಂಸ್ಥೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ಕಡಬ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಚೆಸ್ ಪಂದ್ಯಾಟ ನಡೆಯಿತು.

ಪುತ್ತೂರು ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಚಕ್ರಪಾಣಿ ಬಾಕಿಲ ಮಾತನಾಡಿ, ಶಿಕ್ಷಣ ಇಲಾಖೆ ಪಠ್ಯೇತರ ಚಟುವಟಿಕೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸುವಂತೆ ಪ್ರೇರೇಪಿಸುತ್ತದೆ. ಸೋಲು ಗೆಲುವು ಮನಸ್ಸಿನಲ್ಲಿಟ್ಟುಕೊಳ್ಳದೆ ವಿದ್ಯಾರ್ಥಿ ಜೀವನದಲ್ಲಿ ಸಾಧನೆ ಮಾಡಿದರೆ ಭವಿಷ್ಯದಲ್ಲಿ ಹೆಚ್ಚಿನ ಅವಕಾಶಗಳು ದೊರೆಯುತ್ತವೆ. ಚೆಸ್‌ನಂತಹ ಆಟಗಳನ್ನು ಮನಸ್ಸಿನ ಸ್ಥಿರತೆಯ ಮೂಲಕ ಆಡಬೇಕಾಗುತ್ತದೆ. ಹಾಗಾಗಿ ಏಕಾಗ್ರತೆ ಮುಖ್ಯ ಎಂದರು.

ಪಂದ್ಯಾಟವನ್ನು ಆಲಂಕಾರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಶೀಲ ಉದ್ಘಾಟಿಸಿದರು. ಶಾಲಾ ಸಂಚಾಲಕ ಗಂಗಾಧರ ಗೌಡ ಕುಂಡಡ್ಕ ಅಧ್ಯಕ್ಷತೆ ವಹಿಸಿದ್ದರು. ನೋಡಲ್ ಅಧಿಕಾರಿಗಳಾದ ಲೋಕೇಶ್, ಚಂದ್ರಶೇಖರ, ಶ್ರೀ ಭಾರತಿ ಶಾಲಾ ಆಂಗ್ಲ ವಿಭಾಗದ ಮುಖ್ಯಸ್ಥ ಸತೀಶ್ ಕುಮಾರ್ ಜಿ.ಆರ್.ಉಪಸ್ಥಿತರಿದ್ದರು.

ಶಾಲಾ ಕನ್ನಡ ಮಾಧ್ಯಮ ವಿಭಾಗದ ಮುಖ್ಯಮಾತಾಜಿ ಆಶಾ ಎಸ್.ರೈ ಪ್ರಾಸ್ತಾವಿಸಿ ಸ್ವಾಗತಿಸಿದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಸಂತೋಷ್ ವಂದಿಸಿದರು. ಶಿಕ್ಷಕ ಚಂದ್ರಹಾಸ ಕೆ.ಸಿ.ಮತ್ತು ಶಿಶುಮಂದಿರದ ಮುಖ್ಯಶಿಕ್ಷಕಿ ಶಾಲಿನಿ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net