

ಮೈಸೂರು: ಬೈರಾಪುರದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿವಿಧ ವೇದಿಕೆಗಳ ಸಮಾರೋಪ ಸಮಾರಂಭವನ್ನು ಮೇ 18 ರಂದು ಬೆಳಗ್ಗೆ 11:30 ಗಂಟೆಗೆ ಕಾಲೇಜು ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಬೈರಾಪುರದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾಕ್ಟರ್ ವಿ.ವಿ ಜಗದೀಶ್ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ.ಎಂ ಗಾಯಿತ್ರಿ ಅವರು ಭಾಗವಹಿಸಲಿದ್ದಾರೆ.