ಕಾಸರಗೋಡು: ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ 27ನೇ ರಾಜ್ಯ ಸಮ್ಮೇಳನ ಸಾಂಸ್ಕೃತಿಕ ಸಮನ್ವಯತೆಯ ಸಂದೇಶದೊಂದಿಗೆ ಕಾಸರಗೋಡಿನಲ್ಲಿ ಸಂಪನ್ನಗೊಂಡಿತು. ಸಮಾರೋಪ ಸಮಾರಂಭವನ್ನು ಕಾಸರಗೋಡು ನಗರಸಭಾ ವಾರ್ಡ್ ಕೌನ್ಸಿಲರ್ ವರಪ್ರಸಾದ್ ಕೋಟೆಕಣಿ ಉದ್ಘಾಟಿಸಿದರು.
ಕೇಂದ್ರ ಸಮಿತಿ ಅಧ್ಯಕ್ಷ ಶ್ರೀನಿವಾಸ ರಾವ್ ಪಿ.ಬಿ.ಸಭೆಯ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ವಿಶ್ವವಿದ್ಯಾಲಯದ ತುಳು ಅಧ್ಯಯನ ಪೀಠದ ಸಂಯೋಜಕ ಮಾಧವ ಎಂ.ಕೆ.ಮುಖ್ಯ ಭಾಷಣಗೈದರು. ಮಾಯಿಪ್ಪಾಡಿ ಡಯಟ್ ಪ್ರಾಂಶುಪಾಲ ಡಾ.ರಘರಾಮ್ ಭಟ್, ಕ.ಸಾ.ಪ.ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ.ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ, ನೈಯಾಂಟಿಗರ ಜಿಲ್ಲಾ ವಿದ್ಯಾಧಿಕಾರಿ ಇಬ್ರಾಹಿಂ ಬುಡ್ರಿಯ, ಕನ್ನಡ ಹೋರಾಟ ಸಮಿತಿಯ ಅಧ್ಯಕ್ಷ ವಕೀಲ ಮುರಳೀಧರ ಬಳ್ಳುಕ್ಕುರಾಯ, ಜಿಲ್ಲಾ ನಿವೃತ್ತ ವಿದ್ಯಾಧಿಕಾರಿ ಎನ್.ಕೆ.ಮೋಹನದಾಸ್, ಕ.ಸಾ.ಪ.ಸಂಘಟನಾ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ, ಸತ್ಯನಾರಾಯಣ ರಾವ್ ಮೊದಲಾದವರು ಉಪಸ್ಥಿತರಿದ್ದರು. ರಾಜ್ಯ ಸಮ್ಮೇಳನದ ಪೂರ್ವಭಾವಿಯಾಗಿ ನಡೆಸಿದ ಕ್ರೀಡಾಕೂಟ ಹಾಗೂ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಕೇಂದ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್ ಶೆಟ್ಟಿ ಬೇಳ ಸ್ವಾಗತಿಸಿದರು. ಕವಿತಾ ಕೂಡ್ಲು ನಿರೂಪಿಸಿದರು. ಮಹಾಲಿಂಗ ಭಟ್ ವಂದಿಸಿದರು.