ಸಂಸ್ಥಾಪನಾ ದಿನಾಚರಣೆಯ ಸಮಾರೋಪ

HBDNN17-7-201418-33-5518HBHBDNKVSJPG
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದ 135ನೇ ಸಂಸ್ಥಾಪನಾ ದಿನಾಚರಣೆಯ 9 ದಿನಗಳ ಕಾರ್ಯಕ್ರಮದ ಸಮಾರೋಪ ಮತ್ತು `ನಾಡು- ನುಡಿಗೆ ಶ್ರಮಿಸಿದ ಚೇತನಗಳ ಭಾವಚಿತ್ರಗಳ ಅನಾವರಣ' ಕಾರ್ಯಕ್ರಮವನ್ನು ಸಂಘದ ನಾಡೋಜ ಡಾ. ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ಜು. 28ರಂದು ಸಂಜೆ 5.30ಕ್ಕೆ ಆಯೋಜಿಸಲಾಗಿದೆ.
ಕಾನೂನು ಸಚಿವ ಎಚ್.ಕೆ. ಪಾಟೀಲ ನಾಡು- ನುಡಿಗೆ ಶ್ರಮಿಸಿದ ಚೇತನಗಳ ಭಾವಚಿತ್ರಗಳ ಅನಾವರಣ ಮಾಡುವರು. ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ಶಾಸಕ ಅಬ್ಬಯ್ಯ ಪ್ರಸಾದ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಽಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಹಾಗೂ ಸಿಎಂಡಿಆರ್ ನಿರ್ದೇಶಕ ಬಸವಪ್ರಭು ಜಿರ್ಲಿ ಅತಿಥಿಗಳಾಗಿ ಪಾಲ್ಗೊಳ್ಳುವರು. ಹಂಪಿ ಕನ್ನಡ ವಿಶ್ವವಿದ್ಯಾಲಯ ವಿಶ್ರಾಂತ ಕುಲಪತಿ ಡಾ. ಮಲ್ಲಿಕಾ ಘಂಟಿ ಸಮಾರೋಪ ನುಡಿಗಳನ್ನಾಡುವರು. ಸಂಘದ ಅಧ್ಯಕ್ಷ ಚಂದ್ರಕಾAತ ಬೆಲ್ಲದ ಅಧ್ಯಕ್ಷತೆ ವಹಿಸುವರು. ಇಟಿಗಟ್ಟಿಯ ಜಾನಪದ ಕಲಾವಿದ ಪ್ರಭು ಬಸಪ್ಪ ಕುಂದರಗಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಡುವರು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net