

ದೇವನಹಳ್ಳಿ: ಬೆಂಗಳೂರು ಉತ್ತರ ತಾಲೂಕಿನ ಬಾಗಲೂರು ಹೊರವಲಯದ ಬಾಗಲೂರು ಕಣ್ಣೂರು ರಸ್ತೆಯಲ್ಲಿ ಭಾನುವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಯುವಕರು ದುರ್ಮರಣಕ್ಕೀಡಾಗಿದ್ದಾರೆ.
ಕಾಂಕ್ರೀಟ್ ಮಿಕ್ಸರ್ ಲಾರಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಬಾಗಲೂರಿನ ಶಿವು(26), ಮಿಲನ್(25) ಮತ್ತು ಸಾತನೂರಿನ ಮಧು(26) ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಅನೂಷ(25) ಸ್ಥಿತಿ ಗಂಭೀರವಾಗಿದ್ದು, ಆಸ್ವತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿರಿ ನಿವೃತ್ತ ಉಪನ್ಯಾಸನ ಪತ್ನಿ, ಇಬ್ಬರು ಮಕ್ಕಳು ನಾಲೆಗೆ ಹಾರಿ ಆತ್ಮಹತ್ಯೆ! ಸಾವಿಗೂ ಮುನ್ನ ನಡೆದಿತ್ತು ವಾಕ್ಸಮರ
ಕಾಂಕ್ರೀಟ್ ಮಿಕ್ಸರ್ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಹೊಡೆದಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಚಿಕ್ಕಜಾಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.