ಕಾಂಕ್ರೀಟ್ ರಸ್ತೆ ಉದ್ಘಾಟನೆ

ಕಾಂಕ್ರೀಟ್ ರಸ್ತೆ ಉದ್ಘಾಟನೆ
Published on

ಸೋಮವಾರಪೇಟೆ: ಮುಖ್ಯಮಂತ್ರಿಗಳ ವಿಶೇಷ ಅಭಿವೃದ್ಧಿ ಯೋಜನೆ, ಮಹಾನಗರ ಪಾಲಿಕೆಯಲ್ಲಿ ಅಲ್ಪಸಂಖ್ಯಾಯತರ ಕಾಲನಿ ಅಭಿವೃದ್ಧಿ ಯೋಜನೆ, ಅಲ್ಪ ಸಂಖ್ಯಾಯತರ ವಿವಿಧ ಸಮುದಾಯಗಳ ಅಭಿವೃದ್ಧಿ ಯೋಜನೆಯಲ್ಲಿ ಬಜೆಗುಂಡಿ ಕಾಲನಿಯಲ್ಲಿ ನಿರ್ಮಾಣವಾಗಿರುವ 47.50ಲಕ್ಷ ರೂ.ಗಳ ವೆಚ್ಚದ ಕಾಂಕ್ರೀಟ್ ರಸ್ತೆಯನ್ನು ಶಾಸಕ ಡಾ.ಮಂತರ್‌ಗೌಡ ಮಂಗಳವಾರ ಉದ್ಘಾಟಿಸಿದರು.

ಬಜೆಗುಂಡಿ ಕಾಲಿನಿಯಲ್ಲಿ ಬಹುತೇಕ ಜನ ಕಾರ್ಮಿಕರು, ಬಡವರು ವಾಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಬಡ ಜನರ ಶ್ರೇಯೋಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುತ್ತದೆ. ಹಸಿವು ಮುಕ್ತ ಕರ್ನಾಟಕ ಕಾಂಗ್ರೆಸ್ ಕನಸಾಗಿದೆ. ಈ ನಿಟ್ಟಿನಲ್ಲಿ ಪಕ್ಷ 5 ಗ್ಯಾರೆಂಟಿಗಳನ್ನು ಮನೆ ಬಾಗಿಲಿಗೆ ತಲುಪಿಸಿದೆ ಎಂದು ಡಾ.ಮಂತರ್‌ಗೌಡ ಹೇಳಿದರು.

ಅನೇಕ ದಶಕಗಳಿಂದ ಬಜೆಗುಂಡಿ ಕಾಲನಿ ನಿವಾಸಿಗಳು ಮಳೆಗಾಲದಲ್ಲಿ ಭಯದಿಂದ ಬದುಕುತ್ತಿದ್ದಾರೆ. ಕಾಂಗ್ರೆಸ್ ಆಡಳಿತದ ಸಂದರ್ಭ ಇಳಿಜಾರು ಪ್ರದೇಶದಲ್ಲಿ ಅನೇಕ ರಸ್ತೆ ಕಾಮಗಾರಿಗಳನ್ನು ಮಾಡಿದೆ. ಕಾಲನಿಯಲ್ಲಿ ಅಪಾಯದ ಸ್ಥಳಗಳಲ್ಲಿ ತಡೆಗೋಡೆ ನಿರ್ಮಾಣ ಮಾಡಬೇಕಾದ ಅನಿವಾರ್ಯತೆ ಇದೆ. ಸರ್ಕಾರದಿಂದ ಅನುದಾನ ತರಲು ಶಕ್ತಿಮೀರಿ ಪ್ರಯತ್ನಿಸುತ್ತೇನೆ. ಬಡವರು ಆತಂಕಪಡುವ ಅಗತ್ಯವಿಲ್ಲ. ಸರ್ಕಾರ ಮತ್ತು ನಾನು ನಿಮ್ಮ ಜತೆ ಇರುತ್ತೇವೆ ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಬೇಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಾರ್ವತಿ, ವಲಯ ಕಾಂಗ್ರೆಸ್ ಅಧ್ಯಕ್ಷ ಕೆ.ಪಿ.ಕುಮಾರ್, ಕೆಪಿಸಿಸಿ ಸದಸ್ಯ ಕೆ.ಎ.ಯಾಕೂಬ್, ಪಕ್ಷದ ಪ್ರಮುಖರಾದ ಸುರೇಂದ್ರ, ಕೆ.ಎ.ಪ್ರಕಾಶ್, ಅಬ್ದುಲ್ ರಜಾಕ್, ಸುನಿಲ್, ಲಾರೆನ್ಸ್, ಅಶ್ರಫ್, ಪಿಡಿಒ ಮೋಹನ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net