ಕಾಂಕ್ರೀಟ್ ರಸ್ತೆ ಉದ್ಘಾಟನೆ

22.npk-2
ಬೇತು ಗ್ರಾಮದ ಚೆರಿಯಪರಂಬುವಿನಿಂದ ಕಕ್ಕುಂದ ಕಾಡು ಶ್ರೀ ವೆಂಕಟೇಶ್ವರ ದೇವಾಲಯಕ್ಕೆ ಸಂಪರ್ಕ ಕಲ್ಪಿಸುವ ಕಾಂಕ್ರೀಟ್ ರಸ್ತೆಯನ್ನು ಗುರುವಾರ ಗಣ್ಯರು ಉದ್ಘಾಟಿಸಿದರು.
Published on

ನಾಪೋಕ್ಲು: ಸಮೀಪದ ಬೇತು ಗ್ರಾಮದ ಚೆರಿಯಪರಂಬುವಿನಿಂದ ಕಕ್ಕುಂದ ಕಾಡು ಶ್ರೀ ವೆಂಕಟೇಶ್ವರ ದೇವಾಲಯಕ್ಕೆ ಸಂಪರ್ಕ ಕಲ್ಪಿಸುವ ಕಾಂಕ್ರೀಟ್ ರಸ್ತೆಯನ್ನು ಗುರುವಾರ ಉದ್ಘಾಟಿಸಲಾಯಿತು.

ನೂತನ ರಸ್ತೆಯನ್ನು ಉದ್ಘಾಟಿಸಿ ಮಾತನಾಡಿದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್, ಗ್ರಾಮಸ್ಥರ ಬೇಡಿಕೆಯಂತೆ ಶಾಸಕರ ಅನುದಾನದಡಿ ಶ್ರೀ ವೆಂಕಟೇಶ್ವರ ದೇವಾಲಯ ರಸ್ತೆಗೆ ಸಂಪರ್ಕಿಸುವ ಕಾಂಕ್ರೀಟ್ ರಸ್ತೆ ನಿರ್ಮಿಸಲಾಗಿದೆ. ಇದರಿಂದ ಗ್ರಾಮಸ್ಥರ ಬಹುದಿನದ ಬೇಡಿಕೆ ಈಡೇರಿದಂತಾಗಿದೆ. ಹೀಗಾಗಿ ಗ್ರಾಮಸ್ಥರ ಪರವಾಗಿ ಶಾಸಕರಿಗೆ ಧನ್ಯವಾದ ತಿಳಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕಂಗಟಡ ಶಶಿ ಮಂದಣ್ಣ, ಕೆಡಿಪಿ ಸದಸ್ಯ ಕಲಿಯಂಡ ಕೌಶಿ ಕುಶಾಲಪ್ಪ, ಕಾಂಗ್ರೆಸ್ ವಲಯ ಅಧ್ಯಕ್ಷ ಮಾಚೇಟಿರ ಕುಸು ಕುಶಾಲಪ್ಪ, ಗ್ರಾಮಸ್ಥರಾದ ಅಪ್ಪಸ್ವಾಮಿ, ಅಬ್ದುಲ್ಲ, ಶಾಫಿ, ಅಣ್ಣಯ್ಯ, ಬಾಲೆಯಡ ಪ್ರಿಯ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net