ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

29_06_Mdy_Protest 01
Published on

ವಿಜಯವಾಣಿ ಸುದ್ದಿಜಾಲ ಮಂಡ್ಯ

ಕೇಂದ್ರ ಸರ್ಕಾರ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಮಾಡಿರುವುದನ್ನು ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಮುಖಂಡರು-ಕಾರ್ಯಕರ್ತರು ನಗರದಲ್ಲಿ ಸೈಕಲ್ ತುಳಿದು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಬಳಿ ತೆರಳಿ ಪ್ರತಿಭಟಿಸಿದ ಕಾರ್ಯಕರ್ತರು, ಪ್ರಸ್ತುತ ಪೆಟ್ರೋಲ್ ಬೆಲೆ ಲೀಟರ್‌ಗೆ 82 ರೂ. ಇದೆ. 20 ದಿನದಲ್ಲಿ 16ಕ್ಕೂ ಹೆಚ್ಚು ಬಾರಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಯಾಗಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಪ್ರಧಾನಿಗೆ ಪತ್ರ ಬರೆದು ತೈಲ ಬೆಲೆ ಇಳಿಕೆ ಮಾಡುವಂತೆ ಒತ್ತಾಯಿಸಿದ್ದರೂ ಯಾವುದೇ ಸ್ಪಂದನೆ ದೊರಕಿಲ್ಲ. ಜನಹಿತವನ್ನು ಕೇಂದ್ರ ಕಡೆಗಣಿಸಿದೆ. 6 ವರ್ಷದಲ್ಲಿ ಕಚ್ಚಾ ತೈಲದಿಂದ ಸರ್ಕಾರದ ಬೊಕ್ಕಸಕ್ಕೆ 18 ಲಕ್ಷ ಕೋಟಿ ರೂ.ಬಂದಿದೆ. ಯುಪಿಎ ಸರ್ಕಾರ ಇದ್ದಾಗ ಸಬ್ಸಿಡಿ ಕೊಟ್ಟಿದ್ದೇವೆ. ಕರೊನಾದಿಂದ ಬಡವರು, ಕೂಲಿ ಕಾರ್ಮಿಕರು ಸಂಕಷ್ಟದಲ್ಲಿದ್ದಾರೆ. ಅವರ ಕೈಗೆ ಹಣ ಕೊಡಿ. ಆಗ ಮಾರುಕಟ್ಟೆಯಲ್ಲಿ ಖರೀದಿ ಮಾಡುವ ಶಕ್ತಿ ಬರುತ್ತದೆ ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕೆಪಿಸಿಸಿ ವೀಕ್ಷಕ ಎನ್.ಸಂಪಂಗಿ, ಮಾಜಿ ಸಚಿವ ಎಂ.ಎಸ್.ಆತ್ಮಾನಂದ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ, ಮಹಿಳಾಧ್ಯಕ್ಷೆ ಅಂಜನಾ, ಕೆಪಿಸಿಸಿ ಸದಸ್ಯ ಎಂ.ಡಿ.ಜಯರಾಂ, ಕೆಪಿಸಿಸಿ ಕಾರ್ಯದರ್ಶಿ ಹಾಲಹಳ್ಳಿ ರಾಮಲಿಂಗಯ್ಯ, ಮೈಷುಗರ್ ಮಾಜಿ ಅಧ್ಯಕ್ಷ ಸಿದ್ದರಾಮೇಗೌಡ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net