ಹಿಂದು ವಿರೋಧಿ ಧೋರಣೆಗೆ ಖಂಡನೆ

Condemnation of anti-Hindu attitude
ಹುಬ್ಬಳ್ಳಿಯ ವಿದ್ಯಾರ್ಥಿ ನೇಹಾ ಹಿರೇಮಠ ಕೊಲೆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಅಗ್ರಹಿಸಿ ಬಿಜೆಪಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ರಮೇಶ ಜಿಗಜಿಣಗಿ, ಅರುಣ ಶಹಾಪುರ, ವಿಜುಗೌಡ ಪಾಟೀಲ ಮತ್ತಿತರರಿದ್ದಾರೆ.
Published on

ವಿಜಯಪುರ: ಹುಬ್ಬಳಿಯಲ್ಲಿ ವಿದ್ಯಾರ್ಥಿ ನೇಹಾ ಹಿರೇಮಠ ಹತ್ಯೆಯ ಆರೋಪಿಗೆ ಕಠಿಣ ಶಿೆ ವಿಧಿಸುವಂತೆ ಆಗ್ರಹಿಸಿ ಸೋಮವಾರ ಬಿಜೆಪಿ ಕಾರ್ಯಕರ್ತರು ಬೃಹತ್​ ಪ್ರತಿಭಟನೆ ನಡೆಸಿದರು.

ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದ ಬಳಿ ನೂರಾರು ಕಾರ್ಯಕರ್ತರು ಸೇರುವ ಮೂಲಕ ಶುರುವಾದ ಪ್ರತಿಭಟನಾ ಮೆರವಣಿಗೆಯೂ ನಗರದ ಮಹಾತ್ಮ ಗಾಂಧಿ ವೃತ್ತ, ಬಸವೇಶ್ವರ ವೃತ್ತ ಮತ್ತು ಡಾ. ಬಿ.ಆರ್​. ಅಂಬೇಡ್ಕರ್​ ವೃತ್ತಗಳಲ್ಲಿ ಕೆಲಕಾಲ ಪ್ರತಿಭಟಿಸಿ ತಣ ಆರೋಪಿಗೆ ಗಲ್ಲು ಶಿಕ್ಷೇ ವಿಧಿಸಲು ಆಗ್ರಹಿಸಿದರು. ನಂತರ ಕಾಂಗ್ರೆಸ್​ ಸರ್ಕಾರದ ಹಿಂದು ವಿರೋಧಿ ಧೋರಣೆ ಖಂಡಿಸಿ ಜಿಲ್ಲಾಡಳಿಕ್ಕೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನಾ ಮೆರವಣಿಗೆಯುದ್ದಕ್ಕೂ ಭಾರತ ಮಾತಾ ಕೀ ಜೈ, ಮತಾಂಧ ಶಕ್ತಿಗಳಿಗೆ ಧಿಕ್ಕಾರ, ಹಿಂದು ವಿರೋಧಿ ಕಾಂಗ್ರೆಸ್​ ಸರ್ಕಾರಕ್ಕೆ ಧಿಕ್ಕಾರ, ಬೇಜವಾಬ್ದಾರಿ ಹೇಳಿಕೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ ಮತ್ತು ಗೃಹ ಸಚಿವರ ವಿರುದ್ಧ ಘೋಷಣೆ ಮೊಳಗಿಸಿದರು.
ಜಿಲ್ಲಾಧ್ಯಕ್ಷ ಆರ್​.ಎಸ್​. ಪಾಟೀಲ (ಕುಚಬಾಳ) ಮಾತನಾಡಿ, ಅಮಾಯಕ ಹಿಂದು ಯುವತಿ ನೇಹಾ ಸಾವಿಗೆ ಕಾರಣನಾದವನಿಗೆ ಕಠಿಣ ಶಿೆ ವಿಧಿಸಲು ತಕ್ಷಣ ಕ್ರಮ ಕೈಗೊಳ್ಳುವ ಜತೆಗೆ ಯುವತಿಯ ಕುಟುಂಬದ ಬೆಂಬಲಕ್ಕೆ ರಾಜ್ಯ ಸರ್ಕಾರ ನಿಲ್ಲಬೇಕಿತ್ತು. ಆದರೆ, ಮುಖ್ಯಮಂತ್ರಿ ಸೇರಿ ಬಹುತೇಕ ಸಚಿವರು ಉಡಾಫೆ ಹೇಳಿಕೆ ನೀಡುವ ಮೂಲಕ ತನಿಖೆಯ ದಿಕ್ಕು ತಪ್ಪಿಸುತ್ತಿದ್ದಾರೆ.

ಅಲ್ಲದೆ, ನೊಂದ ಕುಟುಂಬದ ತೇಜೋವಧೆ ಮಾಡುತ್ತಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತ ಪಡಿಸಿದರು.

ಸ್ವತ@ ಯುವತಿಯ ಪಾಲಕರೇ ಕಾಂಗ್ರೆಸ್​ ಧೋರಣೆ ಖಂಡಿಸಿದ್ದಾರೆ. ಕಾಂಗ್ರೆಸ್​ನ ಓಲೈಕೆ ರಾಜಕಾರಣದಿಂದಾಗಿ ರಾಜ್ಯದಲ್ಲಿ ಹಿಂದುಗಳು ಭಯದಲ್ಲಿ ಜೀವನ ನಡೆಸುವಂತಾಗಿದೆ.

ಎಲ್ಲೆಂದರಲ್ಲಿ ದೇಶದ್ರೊಹಿ ಹೇಳಿಕೆ ಮತ್ತು ಘೋಷಣೆ ಕೇಳುತ್ತಿವೆ. ನಮ್ಮ ಯುವತಿಯರ ಮೇಲೆ ಅತ್ಯಾಚಾರ, ದೌರ್ಜನ್ಯ ಹೆಚ್ಚುತ್ತಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ದೂರಿದರು.

ಮುಖಂಡ ರಾಮನಗೌಡ ಪಾಟೀಲ ಯತ್ನಾಳ ಮಾತನಾಡಿ, ಟನೆಗೆ ರಾಜ್ಯವೇ ಬೆಚ್ಚಿಬಿದ್ದಿರುವ ಇಂಥ ಹೀನ ಕೃತ್ಯದಲ್ಲಿ ರಾಜಕೀಯ ಮಾಡದೆ ಕಾಂಗ್ರೆಸ್​ ಸರ್ಕಾರ ಆರೋಪಿಗೆ ಕಠಿಣ ಶಿೆ ವಿಧಿಸಬೇಕು. ಇಂತಹ ಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸುವಂತೆ ಹೇಳಿದರು.

ಸಂಸದ ರಮೇಶ ಜಿಗಜಿಣಗಿ, ಮಹಿಳಾ ಟಕದ ಅಧ್ಯಕ್ಷೆ ಸ್ವಪ್ನಾ ಕಣಮುಚನಾಳ ಮಾತನಾಡಿದರು.

ವಿಪ ಮಾಜಿ ಸದಸ್ಯ ಅರುಣ ಶಹಾಪುರ, ವಿಜುಗೌಡ ಪಾಟೀಲ, ಪಾಲಿಕೆ ಸದಸ್ಯರಾದ ಶಿವರುದ್ರ ಬಾಗಲಕೋಟೆ, ಮಳುಗೌಡ ಪಾಟೀಲ, ಕಿರಣ ಪಾಟೀಲ, ಕಾಸುಗೌಡ ಬಿರಾದಾರ, ಸಂಜಯ ಪಾಟೀಲ ಕನಮಡಿ, ವಿವೇಕಾನಂದ ಡಬ್ಬಿ, ಶ್ರೀಹರ್ಷಗೌಡ ಪಾಟೀಲ, ಪ್ರಕಾಶ ಅಕ್ಕಲಕೋಟೆ, ಈರಣ್ಣ ರಾವೂರ, ಸಾಬು ಮಾಶ್ಯಾಳ, ಉಮೇಶ ಕೊಳಕೂರ, ಭೀಮಾಶಂಕರ ಹದ್ನೂರ, ಗೋಪಾಲ ಟಕಾಂಬಳೆ, ಶಂಕರ ಹೂಗಾರ, ವಿಠಲ ಹೊಸಪೇಟ, ಶಿಲ್ಪಾ ಕುದುರಗೊಂಡ, ಸಿದ್ದು ಬುಳ್ಳಾ, ಗುರುಲಿಂಗಪ್ಪ ಅಂಗಡಿ, ಬಸವರಾಜ ಬಿರಾದಾರ, ಮಲ್ಲಿಕಾರ್ಜುನ ಜೋಗೂರ, ಕೃಷ್ಣಾ ಗುನ್ನಾಳಕರ, ರಾಜೇಶ ತಾವಸೆ, ಮಂಜುನಾಥ ಮೀಸೆ, ಶೀತಲಕುಮಾರ ಓಗಿ, ವಿಜಯ ಜೋಶಿ, ಪಾಪುಸಿಂಗ ರಜಪೂತ, ಭರತ ಕೋಳಿ, ಬಸವರಾಜ ಹೂಗಾರ, ಮಹೇಶ ಒಡೆಯರ, ಗುರು ಗಚ್ಚಿನಮಠ, ಲಕ್ಷ್ಮೀ ಕನ್ನೊಳ್ಳಿ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net