

ತಾಳಿಕೋಟೆ: ಬೆಳಗಾವಿ ಅಧಿವೇಶನದಲ್ಲಿ ಸಿ.ಟಿ.ರವಿ ವಿರುದ್ಧ ಸುಳ್ಳು ಆರೋಪದಡಿ ಪ್ರಕರಣ ದಾಖಲಿಸಿದ ಪೊಲೀಸರ ಕ್ರಮ ಖಂಡನೀಯ ಎಂದು ಬಿಜೆಪಿ ಜಿಲ್ಲಾಧ್ಯ ಆರ್.ಎಸ್.ಪಾಟೀಲ (ಕೂಚಬಾಳ) ಹೇಳಿದರು.
ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಉತ್ತಮ ಸಂಸದೀಯ ಪಟುವಾಗಿದ್ದಾರೆ. ಪದ ರಾಷ್ಟ್ರೀಯ ಹಿರಿಯ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಅಂಥವರ ವಿರುದ್ಧ ಸುಳ್ಳು ಆರೋಪ ಮಾಡಿ ಬಂಧಿಸಿರುವ ಸರ್ಕಾರದ ಕ್ರಮ ಸರಿಯಲ್ಲ ಎಂದು ಟೀಕಿಸಿದರು.
ಸಿ.ಟಿ. ರವಿ ಅವರನ್ನು ಕಬ್ಬಿನ ಗದ್ದೆ ಇನ್ನಿತರ ಕಡೆ ಸುತ್ತಾಡಿಸಿ ಅವರನ್ನು ಮಾನಸಿಕವಾಗಿ ಕುಗ್ಗಿಸುವ ಕಾರ್ಯ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರಕ್ಕೆ ಕೋರ್ಟ್ ತಕ್ಕ್ಕ ಉತ್ತರ ನೀಡಿದೆ ಎಂದರು.