ದಲಿತ ಮಹಿಳೆ ಮೇಲೆ ಹಲ್ಲೆಗೆ ಖಂಡನೆ

Published on

ಮೈಸೂರು: ಎಚ್.ಡಿ.ಕೋಟೆ ತಾಲೂಕಿನ ನಾಗನಹಳ್ಳಿಯಲ್ಲಿ ದಲಿತ ಮಹಿಳೆ ಮೇಲೆ ಹಲ್ಲೆ ನಡೆಸಿರುವ ಘಟನೆಯನ್ನು ಖಂಡಿಸಿ ಕರ್ನಾಟಕ ವೀರಕೇಸರಿ ಪಡೆಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಶನಿವಾರ ಪ್ರತಿಭಟನೆ ನಡೆಸಲಾಯಿತು.

ಗ್ರಾಮದ ಕವಿತಾಬಾಯಿ ಮತ್ತು ಅವರ ವಿಕಲಚೇತನ ಪತಿ ರಾಯಪ್ಪ ಅವರ ಮೇಲೆ ಸವರ್ಣೀಯರಾದ ವಿಜಯಕುಮಾರ್ ಮತ್ತು ಪತ್ನಿ ಕವಿತಾ ಮೇರಿ, ಮಗಳಾದ ಶಾಲಿನಿ, ಅಳಿಯ ಯೋಗೇಶ್ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ. ಇದಾಗಿಯೂ ಹಲ್ಲೆಗೊಳಗಾದವರಿಂದ ಜಾತಿ ನಿಂದನೆ ಪ್ರಕರಣ ದಾಖಲಿಸಿಲ್ಲ. ಬದಲಿಗೆ ಹಲ್ಲೆಗೆ ಒಳಗಾದವರ ಮೇಲೆ ದೂರು ದಾಖಲಿಸಿದ್ದಾರೆ ಎಂದು ದೂರಿದರು.

ಈ ಹಿನ್ನೆಲೆಯಲ್ಲಿ ಹಲ್ಲೆ ನಡೆಸಿದವರ ವಿರುದ್ಧ ಕಾನೂನು ರೀತಿ ದೂರು ದಾಖಲಿಸಿ ಮುಂದಿನ ಕ್ರಮ ಜರುಗಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ಹೇಳಿದರು. ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.

ವೀರಕೇಸರಿ ಪಡೆಯ ಅಧ್ಯಕ್ಷ ಮಧುವನ ಚಂದ್ರು, ಮುಖಂಡರಾದ ಬಸವರಾಜು, ಸಿದ್ದರಾಜು, ರಾಮನಾಯಕ, ರಾಜೇಶ್ವರಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net