ಕೇಂದ್ರ ಸರ್ಕಾರದ ವೈಫಲ್ಯಕ್ಕೆ ಖಂಡನೆ

mdg 3
Published on

ಮೂಡಿಗೆರೆ: ಕಾಶ್ಮೀರದಲ್ಲಿ ನಡೆದ ಭಯೋತ್ಪಾದನಾ ದಾಳಿ ಖಂಡಿಸಿ ಎಸ್‌ಡಿಪಿಐ ನಿಂದ ಪಟ್ಟಣದ ಲಯನ್ಸ್ ವೃತ್ತದಲ್ಲಿ ಶುಕ್ರವಾರ ಸಂಜೆ ಕ್ಯಾಂಡಲ್ ಲೈಟ್ ಪ್ರತಿಭಟನೆ ನಡೆಸಲಾಯಿತು.

ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಅಂಗಡಿ ಚಂದ್ರು ಮಾತನಾಡಿ, ಹಿಂದೆ ಪುಲ್ವಾಮಾ ದಾಳಿ ನಡೆದಾಗ ಕೇಂದ್ರ ಸರ್ಕಾರ ಎಚ್ಚೆತ್ತುಕೊಳ್ಳಲಿಲ್ಲ. ಈಗ ಅದೇ ರೀತಿ ನಡೆದ ಭಯೋತ್ಪಾದನಾ ದಾಳಿಯನ್ನು ಕೇಂದ್ರ ಸರ್ಕಾರ ಲಘುವಾಗಿ ಪರಿಗಣಿಸಿದೆ. ದೇಶದ ಗಡಿ ಭದ್ರಪಡಿಸದೆ ನುಸುಳುಕೋರ ಉಗ್ರರ ದಾಳಿಗೆ ಪ್ರತಿಕಾರವಾಗಿ ದೇಶದೊಳಗಿನ ಮೂಲ ನಿವಾಸಿಗಳ ಮೇಲೆ ಸವಾರಿ ನಡೆಸುತ್ತಿರುವುದು ಸರಿಯಲ್ಲ.

ಕೇಂದ್ರ ಸರ್ಕಾರದ ಆಡಳಿತ ವೈಫಲ್ಯವೇ ಈ ದುರ್ಘಟನೆಗೆ ಕಾರಣ. ಉಗ್ರರ ದಾಳಿ ನಡೆಯಲು ವಿಫಲವಾಗಿರುವ ಕೇಂದ್ರ ಸರ್ಕಾರದ ಗೃಹ ಮಂತ್ರಿ ಅಮಿತ್ ಷಾ ಅವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಉಗ್ರರ ದಾಳಿಯಿಂದ ಹುತಾತ್ಮರಾದ ಅಮಾಯಕ ಕುಟುಂಬಕ್ಕೆ ಕೇಂದ್ರ ಸರ್ಕಾರದಿಂದ 50 ಲಕ್ಷ ರೂ. ಪರಿಹಾರ ನೀಡುವ ಜತೆಗೆ ಆ ಕುಟುಂಬದ ಒಬ್ಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಬೇಕು ಎಂದು ಒತ್ತಾಯಿಸಿದರು.

ಎಸ್‌ಡಿಪಿಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಿಜ್ವಾನ್ ಹುಸೇನ್, ಜಿಲ್ಲಾ ಸಮಿತಿ ಸದಸ್ಯ ಕೆ.ಪಿ.ಖಾಲಿದ್, ಕ್ಷೇತ್ರ ಸಮಿತಿ ಸದಸ್ಯರಾದ ಪಿ.ಕೆ.ಹನೀಫ್, ಶಾಹಿದ್, ಇಲ್ಯಾಸ್, ಹಿದಾಯತ್, ಆದಿಲ್, ತೌಸಿಫ್, ಅಲ್ತಾಫ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net