ಮಣಿಪುರದಲ್ಲಿ ದೌರ್ಜನ್ಯ ನಡೆಸಿದವರಿಗೆ ಕಠಿಣ ಶಿಕ್ಷೆಯಾಗಲಿ: ಮಹಿಳಾ ಕಾಂಗ್ರೆಸ್‌ನಿಂದ ಪ್ರತಿಭಟನೆ

1 (6)
Published on

ಮಂಡ್ಯ: ಹಿಂಸಾಚಾರ ಪೀಡಿತ ಮಣಿಪುರದ ಬಿರೇನ್‌ಸಿಂಗ್ ಸರ್ಕಾರ ವಜಾಗೊಳಿಸಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಬೇಕು ಹಾಗೂ ಮಹಿಳೆಯರ ಬೆತ್ತಲೆ ಮೆರವಣಿಗೆ ನಡೆಸಿರುವ ಆರೋಪಿಗಳಿಗೆ ಮರಣ ದಂಡನೆ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ಮೌನ ಪ್ರತಿಭಟನೆ ನಡೆಸಿದರು

ನಗರದ ಕಾವೇರಿ ವನದಲ್ಲಿರುವ ಮಹಾತ್ಮ ಗಾಂಧೀಜಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿ ಮಣಿಪುರದಲ್ಲಿ ಶಾಂತಿ ಮರುಸ್ಥಾಪಿಸುವಂತೆ ಒತ್ತಾಯಿಸಿದರು. ಕಳೆದ ಮೂರು ತಿಂಗಳಿಂದ ಮಣಿಪುರದಲ್ಲಿ ಜನಾಂಗೀಯ ಘರ್ಷಣೆ ನಡೆದು ಅಪಾರ ಪ್ರಮಾಣದ ಸಾವು-ನೋವು ಸಂಭವಿಸಿದೆ. ಮಹಿಳೆಯರ ಮೇಲೆ ದೌರ್ಜನ್ಯದ ಜತೆಗೆ ಸಾಮೂಹಿಕ ಅತ್ಯಾಚಾರ, ಬೆತ್ತಲೆ ಮೆರವಣಿಗೆ ಮಾಡಿರುವುದು ನಾಗರೀಕ ಸಮಾಜ ತಲೆತಗ್ಗಿಸುವಂತಾಗಿದೆ. ಹಿಂಸಾಚಾರದ ಹಿಂದೆ ಕಾಣದ ಕೈಗಳ ಕೈವಾಡ ಇದ್ದು, ಪಟ್ಟಭದ್ರರು ಕುಕಿ ಸಮುದಾಯವನ್ನು ಗುರಿಯಾಗಿಸಿ ದೌರ್ಜನ್ಯ ನಡೆಸುತ್ತಿದ್ದಾರೆ. ಆದರೂ ಸಹ ಅಲ್ಲಿನ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಂಜನಾ ಶ್ರೀಕಾಂತ್, ನಗರಸಭೆ ಮಾಜಿ ಅಧ್ಯಕ್ಷೆ ವಿಜಯಲಕ್ಷ್ಮೀ ರಘುನಂದನ್, ವೀಣಾ ಶಂಕರ್, ಮಮತಾ, ಜಯಲಕ್ಷ್ಮೀ, ಸಿ.ಎಂ.ದ್ಯಾವಪ್ಪ, ಸಾತನೂರು ಕೃಷ್ಣ, ಕೊತ್ತತ್ತಿ ಸಿದ್ದಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net