ದಿನಬಳಕೆ ವಸ್ತುಗಳ ದರ ಏರಿಕೆಗೆ ಖಂಡನೆ

protest
Published on

ಮೈಸೂರು: ಪೆಟ್ರೋಲ್, ಡೀಸೆಲ್, ಹಾಲಿನ ಬೆಲೆ ಏರಿಕೆಯನ್ನು ವಾಪಸ್ ಪಡೆಯಬೇಕು. ಬಸ್ ದರ, ಕುಡಿಯುವ ನೀರಿನ ಹಾಗೂ ಕಸ ವಿಲೇವಾರಿ ದರ ಏರಿಕೆಗಳ ಪ್ರಸ್ತಾಪಗಳನ್ನು ಕೈ ಬಿಡುವಂತೆ ಒತ್ತಾಯಿಸಿ ಭಾರತ ಕಮ್ಯುನಿಸ್ಟ್ (ಮಾರ್ಕ್ಸ್‌ವಾದಿ) ಜಿಲ್ಲಾ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದರು.
ನಗರದ ಗಾಂಧಿ ವೃತ್ತದಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು, ದರ ಏರಿಕೆಯನ್ನು ವಿರೋಧಿಸಿದರು. ಸರ್ಕಾರದ ವಿರುದ್ಧ ವಿವಿಧ ಘೊಷಣೆ ಕೂಗಿ ಆಕ್ರೊಶ ವ್ಯಕ್ತಪಡಿಸಿದರು.
ಒಕ್ಕೂಟ ಸರ್ಕಾರದಿಂದ ಪಡೆಯಬೇಕಾದ ನ್ಯಾಯಯುತ ತೆರಿಗೆ ಪಾಲು ಮತ್ತು ತೆರಿಗೆ ಬಾಕಿ, ಬರ ಪರಿಹಾರದ ಬಾಕಿಯನ್ನು ಪಡೆಯಬೇಕು. ದೊಡ್ಡ ಬಂಡವಾಳದಾರರಿಗೆ ನೀಡುವ ಸಹಾಯಧನ ಕಡಿತ, ಶ್ರೀಮಂತರ ಮೇಲಿನ ತೆರಿಗೆಗೆ ಕ್ರಮವಹಿಸಬೇಕು ಎಂದು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net