ಧರ್ಮಸ್ಥಳದ ಮೇಲಿನ ಅಪಸ್ವರಕ್ಕೆ ಖಂಡನೆ

23blrp3
Published on

ಬೇಲೂರು: ಧಾರ್ಮಿಕ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಖಂಡಿಸಿ ಜಯ ಕರ್ನಾಟಕ ಸಂಘಟನೆಯಿಂದ ಧರ್ಮಸ್ಥಳಕ್ಕೆ ಕಾರು ರ‌್ಯಾಲಿ ಹೊರಟು ಬಳಿಕ ಎಸ್‌ಐಟಿಗೆ ಮನವಿ ಸಲ್ಲಿಸಲಾಗುವುದು ಎಂದು ಸಂಘಟನೆ ಅಧ್ಯಕ್ಷ ಬಿ.ಎನ್.ಜಗದೀಶ್ ತಿಳಿಸಿದರು.

ಧರ್ಮಸ್ಥಳದ ಮೇಲಿನ ಅಪಪ್ರಚಾರ ಹೋಗಲಾಡಿಸುವ ನಿಟ್ಟಿನಲ್ಲಿ ಜಯ ಕರ್ನಾಟಕ ಸಂಘಟನೆಯಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳಿದ ಕಾರುಗಳ ರ‌್ಯಾಲಿ ಬೇಲೂರಿಗೆ ಆಗಮಿಸಿದ ಸಂದರ್ಭ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಧಾರ್ಮಿಕ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಹಲವು ಆರೋಪಗಳನ್ನು ಹೊರಿಸಲಾಗುತ್ತಿದೆ. ಜತೆಗೆ ಅಲ್ಲಿನ ಘಟನೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಯೂ ಟ್ಯೂಬರ್‌ಗಳು ನಕಾರಾತ್ಮಕವಾಗಿ ಬಿಂಬಿಸುವ ಕೆಲಸ ಮಾಡಿದ್ದನ್ನು ನೋಡಿದ ಜನಸಾಮಾನ್ಯರಿಗೆ ಇದು ನಿಜವೇನೋ ಎಂಬ ಅನುಮಾನದಲ್ಲಿ ನೋಡುವಂತಾಗಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ತನಿಖೆ ನಡೆಯುತ್ತಿದ್ದು, ಸತ್ಯ ಏನೆಂಬುದು ಬೆಳಕಿಗೆ ಬರಲಿದೆ ಎಂದರು.

ಜಯ ಕರ್ನಾಟಕ ಸಂಘಟನೆ ಕಾರ್ಯಾಧ್ಯಕ್ಷ ಪ್ರಕಾಶ್ ರೈ, ಹಿರಿಯ ಉಪಾಧ್ಯಕ್ಷ ಮುನಿಸ್ವಾಮಣ್ಣ, ಉಪಾಧ್ಯಕ್ಷ ಹರೀಶ್, ಪ್ರಧಾನ ಕಾರ್ಯದರ್ಶಿ ಗಗನರಾಜ್, ಸಂಘಟನಾ ಕಾರ್ಯದರ್ಶಿ ಅಂಬರೀಶ್, ಮಂಜುಳಾ, ಜಿಲ್ಲಾಧ್ಯಕ್ಷ ಎಂ.ಕೆ.ಆರ್.ಸೋಮೇಶ್, ಉಪಾಧ್ಯಕ್ಷ ಶ್ರೇಯಸ್, ತಾಲೂಕು ಅಧ್ಯಕ್ಷ ಎಸ್.ಎಂ.ರಾಜು. ಕಾರ್ಯಾಧ್ಯಕ್ಷ ಲಕ್ಷ್ಮಣ್, ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net