ಮಣಿಪುರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಖಂಡನೆ

19
Published on

ಮಣಿಪುರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಒತ್ತಾಯಿಸಿ ಕರ್ನಾಟಕ ದಲಿತ ಪ್ಯಾಂಥರ್ ವತಿಯಿಂದ ಸೋಮವಾರ ಟೌನ್‌ಹಾಲ್ ಮುಂಭಾಗದ ಅಂಬೇಡ್ಕರ್ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಯಿತು.


ಭೀಮ್ ಆರ್ಮಿ ಸಂಸ್ಥಾಪಕ ಚಂದ್ರಶೇಖರ್ ಆಜಾದ್ ಅವರ ಹೋರಾಟ ಹತ್ತಿಕ್ಕುವ ಸಲುವಾಗಿ ಅವರ ಕೊಲೆ ಯತ್ನ ಮಾಡಿರುವುದು ಖಂಡನೀಯ. ಮಣಿಪುರದ ಬುಡಕಟ್ಟು ಜನಾಂಗದ ಮಹಿಳೆಯರ ಅಮಾನವೀಯ ಬೆತ್ತಲೆ ಮೆರವಣಿಗೆ ಹಾಗೂ ಕ್ರೈಸ್ತ ಸಮುದಾಯಗಳ ಮತ್ತು ಇತರೆ ಸಮುದಾಯಗಳ ಮೇಲೆ ಮಾರಣಾಂತಿಕ ದಾಳಿ ಮಾಡಿರುವುದು ಮನುಷ್ಯರೇ ತಲೆತಗ್ಗುಸುವಂತಿದೆ. ಹೀಗಾಗಿ ಕೂಡಲೇ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಅಧ್ಯಕ್ಷ ಯೋಗನರಸಿಂಹ, ಪದಾಧಿಕಾರಿಗಳಾದ ಮೋಹನ್‌ಕುಮಾರ್, ಸುರೇಶ್‌ಕುಮಾರ್, ಶಿವಣ್ಣ, ಗಿರೀಶ್, ಪ್ರಸಾದ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net