ಭಿತ್ತಿಪತ್ರ ಪ್ರದರ್ಶನಕ್ಕೆ ಖಂಡನೆ

CAN_5865
Published on

ಮೈಸೂರು: ‘ಫ್ರೀ ಕಾಶ್ಮೀರ’ ಭಿತ್ತಿಪತ್ರ ಪ್ರದರ್ಶನ ಖಂಡಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಶುಕ್ರವಾರ ನಗರದ ಗನ್‌ಹೌಸ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಮಾನಸಗಂಗೋತ್ರಿಯಲ್ಲಿ ದಲಿತ ವಿದ್ಯಾರ್ಥಿ ಒಕ್ಕೂಟ, ಬಿವಿಎಸ್, ಎಸ್‌ಎಫ್‌ಐ, ಎಐಡಿಎಸ್‌ಒ ಸಂಘಟನೆಗಳು ಜಂಟಿಯಾಗಿ ಜ.8ರಂದು ಪ್ರತಿಭಟನೆ ನಡೆಸಿದ್ದವು. ಈ ವೇಳೆ ‘ಫ್ರೀ ಕಾಶ್ಮೀರ’ ಫಲಕವನ್ನು ಪ್ರದರ್ಶಿಸಲಾಗಿದೆ. ಇದು ಖಂಡನೀಯ ಇಂತಹ ಘಟನೆಯ ಮೂಲಕ ವಿಶ್ವವಿದ್ಯಾಲಯದ ಪರಿಸರವನ್ನು ರಾಷ್ಟ್ರವಿರೋಧಿ ಚಟುವಟಿಕೆಗಳ ತಾಣವಾಗಿ ನಿರ್ಮಾಣ ಮಾಡಲಾಗುತ್ತಿದೆ. ವಿದ್ಯಾರ್ಥಿಗಳ ಸಂಘಟನೆಗಳ ನೆಪದಲ್ಲಿ ವಿದ್ಯಾರ್ಥಿಗಳನ್ನು ದಿಕ್ಕು ತಪ್ಪಿಸಲಾಗುತ್ತಿದೆ ಎಂದು ಆರೋಪಿಸಿದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನಾಕಾರರು, ಫಲಕ ಪ್ರದರ್ಶಿಸಿದವರ ವಿರುದ್ಧ ಪ್ರಕರಣ ದಾಖಲಿಸಿ ಕೂಡಲೇ ಅವರನ್ನು ಬಂಧಿಸಬೇಕು. ತಪ್ಪಿತಸ್ಥರನ್ನು ವಿವಿಯಿಂದಲೇ ವಜಾ ಮಾಡಬೇಕು ಎಂದು ಆಗ್ರಹಿಸಿದರು.
ಸಂಘಟನೆಯ ಮುಖಂಡರಾದ ರಾಕೇಶ್, ಶ್ರೀರಾಮ, ಗೌತಮ್, ಶರತ್, ಮಲ್ಲಪ್ಪ, ಪ್ರಜ್ಞಾ ಕಶ್ಯಪ್ ಇನ್ನಿತರರು ಪ್ರತಿಭಟನೆಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net