

ಮಂಗಳೂರು: ಪಕ್ಷ ಮುಖಂಡ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ದ.ಕ.ಜಿಲ್ಲಾ ಕಾಂಗ್ರೆಸ್ ವತಿಯಿಂದ ಪುರಭವನದ ಎದುರಿನ ಪಾರ್ಕ್‌ನಲ್ಲಿ ಬುಧವಾರ ಮೌನ ಪ್ರತಿಭಟನೆ ನಡೆಯಿತು.
ಉತ್ತರ ಪ್ರದೇಶದ ಪ್ರಾದೇಶಿಕ ಕಾಂಗ್ರೆಸ್ ಅಧ್ಯಕ್ಷ ನಕುಲ್ ದುಬೆ ಮಾತನಾಡಿ, ಬಿಜೆಪಿ ದ್ವೇಷ ರಾಜಕಾರಣ ನಡೆಸುತ್ತಿದ್ದರೂ, ಅದಕ್ಕೆ ಪ್ರತ್ಯುತ್ತರವಾಗಿ ರಾಹುಲ್ ಗಾಂಧಿ ಪ್ರೀತಿಯ ಸಂದೇಶ ಸಾರುತ್ತಿದ್ದಾರೆ. ಗಾಂಧಿ ತತ್ವದಡಿ ಹೋರಾಟದ ಮೂಲಕ ಕಾಂಗ್ರೆಸ್ ರಾಹುಲ್ ಗಾಂಧಿಗೆ ಬೆಂಬಲ ನೀಡುತ್ತದೆ ಎಂದರು.
ಗಾಂಧಿ ಪ್ರತಿಮೆಗೆ ಮಾಲಾರ್ಪಣೆಯೊಂದಿಗೆ ಆರಂಭಗೊಂಡ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಜೆ.ಆರ್.ಲೋಬೋ ಪ್ರಾಸ್ತಾ ವಿಕವಾಗಿ ಮಾತನಾಡಿದರು. ಕಾಂಗ್ರೆಸ್ ಮುಖಂಡರಾದ ಅಬ್ದುಲ್ ಸಲೀಂ, ಶಾಲೆಟ್ ಪಿಂಟೋ, ವಿಶ್ವಾಸ್‌ಕುಮಾರ್ ದಾಸ್, ಜೋಕಿಂ ಡಿಸೋಜ, ಸುರೇಶ್ ಬಳ್ಳಾಲ್, ಅಬ್ದುಲ್ ರವೂಫ್, ಅಬ್ದುಲ್ ಲತೀಫ್, ಶುಭೋದಯ ಆಳ್ವ, ಟಿ.ಕೆ.ಸುಧೀರ್, ನಜೀರ್ ಬಜಾಲ್, ಅಪ್ಪಿ, ಸಬಿತಾ ಮಿಸ್ಕಿತ್, ಶಾಂತಲಾ ಗಟ್ಟಿ, ಚಂದ್ರಕಲಾ ಜೋಗಿ ಸೇರಿದಂತೆ ಹಲವರು ಇದ್ದರು.