ಕಾಂಗ್ರೆಸ್ ನಿಂದ ಸಂತಾಪ ಸಭೆ

11adarshkdga2
Published on

ಮಡಿಕೇರಿ: ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ಟಿ.ಜಾನ್‌ರವರ ನಿಧನಕ್ಕೆ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಸಂತಾಪ ಸೂಚಿಸಿದೆ.


ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ಸಂತಾಪ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಪಕ್ಷದ ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ಟಿ.ಪಿ.ರಮೇಶ್, ಕೊಡುಗೈ ದಾನಿಯೂ ಆಗಿದ್ದ ಅವರು ಸಾಮಾಜಿಕ ಕಳಕಳಿಯೊಂದಿಗೆ ಯಶಸ್ವೀ ರಾಜಕಾರಣಿ ಎನಿಸಿಕೊಂಡಿದ್ದರು. ಅವರ ಅಗಲಿಕೆ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದರು.


ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಮಾತನಾಡಿ, ಕಾಂಗ್ರೆಸ್ ಗಾಗಿ ಶ್ರಮಿಸಿದ ನಿಷ್ಠಾವಂತ ನಾಯಕ ಟಿ.ಜಾನ್ ಅವರನ್ನು ಕಳೆದುಕೊಂಡು ಪಕ್ಷ ಬಡವಾಗಿದೆ. ಯುವ ಕಾರ್ಯಕರ್ತರಿಗೆ ಮಾರ್ಗದರ್ಶಕರಾಗಿದ್ದ ಅವರು ಸದಾ ನಮ್ಮ ನೆನಪಿನಲ್ಲಿ ಉಳಿಯುತ್ತಾರೆ ಎಂದರು.


ಈ ಸಂದರ್ಭದಲ್ಲಿ ಕೆಪಿಸಿಸಿ ಪದಾಧಿಕಾರಿಗಳಾದ ಕೆ.ಪಿ.ಚಂದ್ರಕಲಾ, ಸಿ.ಎಸ್.ಅರುಣ್ ಮಾಚಯ್ಯ, ಎಚ್.ಎಸ್.ಚಂದ್ರಮೌಳಿ, ಎ.ಎಸ್.ಪೊನ್ನಣ್ಣ, ಮೆರೋಜ್ ಖಾನ್, ಸುಮಾ ವಸಂತ್, ಮಿಟ್ಟು ಚಂಗಪ್ಪ, ವೀಣಾ ಅಚ್ಚಯ್ಯ, ಎಂ.ಸಿ.ನಾಣಯ್ಯ, ಜೀವಿಜಯ, ಮಂಥರ್ ಗೌಡ, ಕೆ.ಎಂ.ಲೋಕೇಶ್, ಹರಪಳ್ಳಿ ರವೀಂದ್ರ, ಬೇಕಲ್ ರಮಾನಾಥ್, ಜಿಲ್ಲಾ ಮುಂಚೂಣಿ ಘಟಕದ ಅಧ್ಯಕ್ಷರುಗಳು, ಡಿಸಿಸಿ ಸದಸ್ಯರುಗಳು ಹಾಗೂ ಕಾರ್ಯಕರ್ತರು ಸಂತಾಪ ಸೂಚಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net