ಎಚ್.ಪಿ.ಮಹೇಂದ್ರಗೆ ಶ್ರದ್ಧಾಂಜಲಿ ಸಲ್ಲಿಕೆ

23-GPT-4
Published on

ಗುಂಡ್ಲುಪೇಟೆ: ರಾಜ್ಯ ಗ್ರಾಮ ಪಂಚಾಯಿತಿ ನೌಕರ ಸಂಘದ ತಾಲೂಕು ಕಚೇರಿಯಲ್ಲಿ ಸೋಮವಾರ ಆಯೋಜಿಸಿದ್ದ ಸಭೆಯಲ್ಲಿ ಸಂಘದ ತಾಲೂಕು ಅಧ್ಯಕ್ಷರಾಗಿದ್ದ ದಿ.ಎಚ್.ಪಿ.ಮಹೇಂದ್ರ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.


ತಾಲೂಕು ಪಂಚಾಯಿತಿಯ ಕಾರ್ಯನಿರ್ವಹಣಾಧಿಕಾರಿ ಷಣ್ಮುಖ, ಪಿಡಿಒಗಳಾದ ಮೋಹನ್, ಎಚ್.ಪಿ.ಮಮತಾ, ರವಿಕುಮಾರ್, ಶಾಂತರಾಜು, ಗ್ರಾಮ ಪಂಚಾಯಿತಿ ನೌಕರ ಸಂಘದ ರಾಜ್ಯಾಧ್ಯಕ್ಷ ಎಂ.ಬಿ.ನಾಡಗೌಡ, ರಾಜ್ಯಪ್ರಧಾನ ಕಾರ್ಯದರ್ಶಿ ಜಿ.ರಾಮಕೃಷ್ಣ, ಗೋಪಾಲ್, ಜಿಲ್ಲಾಧ್ಯಕ್ಷ ಬರಗಿ ಸಿದ್ದರಾಜು, ಉಪಾಧ್ಯಕ್ಷ ಚಿಕ್ಕತುಪ್ಪೂರು ಮಲ್ಲು, ಖಜಾಂಚಿ ದೊರೆಸ್ವಾಮಿ, ನೂತನ ಅಧ್ಯಕ್ಷ ಬೊಮ್ಮನಹಳ್ಳಿ ರಾಜು, ಪ್ರಧಾನ ಕಾರ್ಯದರ್ಶಿ ಸುರೇಶ್, ವೆಂಕಟರಾಜು, ಮಂಜು, ದಿ.ಮಹೇಂದ್ರ ಅವರ ತಂದೆ ಪುಟ್ಟಸ್ವಾಮಿ, ನೌಕರರ ಸಂಘದ ಸದಸ್ಯರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net