ಅತ್ಯಾಚಾರ ಪ್ರಕರಣ ನಿಷ್ಪಕ್ಷಪಾತ ತನಿಖೆ ನಡೆಸಿ

mm 23-12
Published on

ವಿಜಯಪುರ:ಧರ್ಮಸ್ಥಳ ವ್ಯಾಪ್ತಿಯಲ್ಲಿ ನಡೆದಿವೆ ಎನ್ನಲಾದ ಮಹಿಳೆಯರ ಕೊಲೆ, ಅತ್ಯಾಚಾರದ ಆಘಾತಕಾರಿ ಪ್ರಕರಣಗಳ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸುವುದು ಸೇರದಂತೆ ಮತ್ತಿತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಲ್​ ಇಂಡಿಯಾ ಮಹಿಳಾ ಸಾಂಸತಿಕ ಸಂಟನೆ (ಎಐಎಂಎಸ್​ಎಸ್​) ಯ ಜಿಲ್ಲಾ ಟಕದ ಪದಾಧಿಕಾರಿಗಳು ಬುಧವಾರ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಧರ್ಮಸ್ಥಳ ವ್ಯಾಪ್ತಿಯಲ್ಲಿ ಕಳೆದ 20 ವರ್ಷಗಳಲ್ಲಿ ನಡೆದಿವೆ ಎನ್ನಲಾದ ಮಹಿಳೆಯರ ಅಸಹಜ ಸಾವು, ವಿದ್ಯಾರ್ಥಿನಿಯರ ನಾಪತ್ತೆ, ೂರ ಕೊಲೆ, ಅತ್ಯಾಚಾರ ಹಾಗೂ ದೌರ್ಜನ್ಯಗಳ ಪ್ರಕರಣಗಳು ಜನತೆಯಲ್ಲಿ ತೀವ್ರ ಆತಂಕ ಮೂಡಿಸಿವೆ. ಅನಾಮಧೇಯ ವ್ಯಕ್ತಿಯೊಬ್ಬ ಇತ್ತೀಚೆಗೆ ಪೊಲೀಸ್​ ಠಾಣೆಗೆ ಭೇಟಿ ನೀಡಿ ನೂರಾರು ಮಹಿಳೆಯರ ಶವಗಳನ್ನು ಹೂತಿದ್ದೇನೆ ಎಂದಿದ್ದಾನೆ. ಈ ವಿಷಯಗಳು ಸಾರ್ವಜನಿಕ ವಲಯದಲ್ಲಿ ವ್ಯಾಪಕವಾಗಿ ಚರ್ಚೆಗೆ ಒಳಪಡುತ್ತಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರ ಇತ್ತೀಚೆಗೆ ಪ್ರಕರಣದ ಕುರಿತ ನಿಷ್ಪಕ್ಷಪಾತ ತನಿಖೆ ನಡೆಸಲು ಎಸ್​ಐಟಿ ರಚಿಸಿದೆ.

ಹೀಗಾಗಿ ಈ ಅಸಹಜ ಸಾವುಗಳ ಕುರಿತು ಸರ್ಕಾರ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ತಪ್ಪಿತಸ್ಥರು ಯಾರೇ ಪ್ರಭಾವಿಗಳಾಗಿದ್ದರೂ ಅವರಿಗೆ ಕಠಿಣ ಶಿೆಯಾಗಬೇಕು. ಸಂತ್ರಸ್ತ ಕುಟುಂಬಗಳಿಗೆ ರಕ್ಷಣೆ ನೀಡಬೇಕು ಎಂದು ಸಂಟನೆಯ ಪದಾಧಿಕಾರಿಗಳು ಆಗ್ರಹಿಸಿದರು.

ಸಂಟನೆಯ ಜಿಲ್ಲಾಧ್ಯಕ್ಷೆ ಗೀತಾ ಎಚ್​. ಕಾರ್ಯದರ್ಶಿ ಶಿವಬಾಳಮ್ಮ ಕೊಂಡಗೂಳಿ, ಜಂಟಿ ಕಾರ್ಯದರ್ಶಿ ಶಿವರಂಜನಿ, ಜಿಲ್ಲಾ ಸಮಿತಿ ಸದಸ್ಯೆ ಜಬೀನಾ ಇದ್ದರು.

ಧರ್ಮಸ್ಥಳ ವ್ಯಾಪ್ತಿಯಲ್ಲಿ ನಡೆದಿವೆ ಎನ್ನಲಾದ ಮಹಿಳೆಯರ ಅಸಹಜ ಸಾವುಗಳ ಪ್ರಕರಣವನ್ನು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಒತ್ತಾಯಿಸಿ ವಿಜಯಪುರದಲ್ಲಿ ಎಐಎಂಎಸ್​ಎಸ್​ ಪದಾಧಿಕಾರಿಗಳು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರಿಗೆ ಮನವಿ ಸಲ್ಲಿಸಿದರು. ಗೀತಾ ಎಚ್​., ಶಿವಬಾಳಮ್ಮ ಕೊಂಡಗೂಳಿ, ಶಿವರಂಜನಿ ಮತ್ತಿತರರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net