ಸಂವಿಧಾನ ನಿಯಮದಂತೆ ಕಾರ್ಯ ನಿರ್ವಹಣೆ

samvidhana
ಅದಮಾರು ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಗಾಂದೀಜಿ ಹಾಗೂ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.
Published on

ಪಡುಬಿದ್ರಿ: ಸಂವಿಧಾನದ ನಿಯಮದಂತೆ ನಾವೆಲ್ಲರೂ ಕೆಲಸ ಮಾಡಬೇಕು. ನಾವೆಲ್ಲ ಈ ರಾಷ್ಟ್ರದ ಪ್ರಜೆಗಳಾಗಿ ಸಂವಿಧಾನಕ್ಕೆ ಯಾವುದೇ ಭಂಗ ಬಾರದಂತೆ ರಾಷ್ಟ್ರದ ಪ್ರಗತಿಗೆ ಕೆಲಸ ಮಾಡಬೇಕು ಎಂದು ಅದಮಾರು ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಸಂಜೀವ ನಾಯ್ಕ ಹೇಳಿದರು.

ಅದಮಾರು ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಸೋಮವಾರ ನಡೆದ ಸಂವಿಧಾನ ದಿನಾಚರಣೆಯಲ್ಲಿ ಮಾತನಾಡಿದರು.

ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಲಾವಣ್ಯ ಸಂವಿಧಾನದ ಮಹತ್ವದ ಕುರಿತು ಮಾತನಾಡಿದರು. ಅರ್ಥಶಾಸ್ತ್ರ ಉಪನ್ಯಾಸಕಿ ಶ್ರುತಿ, ಆಂಗ್ಲಭಾಷೆ ಉಪನ್ಯಾಸಕಿ ಶುಭಾಶ್ರೀ, ಕನ್ನಡ ಉಪನ್ಯಾಸಕ ದೇವಿಪ್ರಸಾದ್ ಬೆಳ್ಳಿಬೆಟ್ಟು, ಕನ್ನಡ ಮಾದ್ಯಮ ಪ್ರೌಢಶಾಲೆಯ ಆಂಗ್ಲಾ ಭಾಷಾ ಶಿಕ್ಷಕಿ ಪ್ರತಿಮಾ ಭಟ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಚೈತ್ರ ಸ್ವಾಗತಿಸಿದರು. ಮನೀಶ್ ಕಾರ್ಯಕ್ರಮ ನಿರೂಪಿಸಿದರು. ಕಾರ್ತಿಕ್ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net