

ಕಾಸರಗೋಡು: ಭಾರತದಲ್ಲಿ ಲಕ್ಷಾಂತರ ಮಂದಿ ಆಶಾ ಕಾರ್ಯಕರ್ತೆಯರು ತಮಗೆ ಸಿಗುವ ಅತ್ಯಲ್ಪ ಗೌರವಧನದಿಂದಾಗಿ ಅತ್ಯಂತ ಶೋಚನೀಯ ಜೀವನವನ್ನು ನಡೆಸುವ ಪರಿಸ್ಥಿತಿ ಎದುರಾಗಿದೆ ಎಂದು ಬಿಎಂಎಸ್ ರಾಜ್ಯ ಉಪಾಧ್ಯಕ್ಷ ಪಿ.ಮುರಳೀಧರನ್ ತಿಳಿಸಿದ್ದಾರೆ.
ಬಿಎಂಎಸ್ ಕಚೇರಿ ಸಭಾಂಗಣದಲ್ಲಿ ಕೇರಳ ಆಶಾ ಕಾರ್ಯಕರ್ತೆಯರ ಸಂಘದ ಕಾಸರಗೋಡು ಜಿಲ್ಲಾ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.
ಸಂಘಟನೆ ಜಿಲ್ಲಾ ಸಮಿತಿ ಅಧ್ಯಕ್ಷೆ ಜಯಲಕ್ಷ್ಮೀ ಮಂಜೇಶ್ವರ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು. ಬಿಎಂಎಸ್ ಜಿಲ್ಲಾ ಅಧ್ಯಕ್ಷ ಉಪೇಂದ್ರ ಕೋಟೆಕಣಿ ಉಪಸ್ಥಿತರಿದ್ದರು. ಬಿಎಂಎಸ್ ಜಿಲ್ಲಾ ಕಾರ್ಯದರ್ಶಿ ಕೆ.ವಿ. ಬಾಬು ಸಂಘಟನೆ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಿಯಂತ್ರಿಸಿದರು. ರಾಜ್ಯ ಸಮಿತಿ ಸದಸ್ಯ ಬಿ.ವಿ.ಬಾಲಕೃಷ್ಣನ್ ಸಮಾರೋಪ ಭಾಷಣ ಮಾಡಿದರು. ಬಿಎಂಎಸ್ ಜಿಲ್ಲಾ ಉಪಾಧ್ಯಕ್ಷ ಅನಿಲ್ ಬಿ.ನಾಯರ್, ಬಿಎಂಎಸ್ ಜಿಲ್ಲಾ ಜಂಟಿ ಕಾರ್ಯದರ್ಶಿಗಳಾದ ಪಿ.ದಿನೇಶ್ ಬಂಪ್ರಾಣ, ಯಶವಂತಿ ಬೆಜ್ಜೆ, ಕಾಸರಗೋಡು ಪ್ರಾದೇಶಿಕ ಕಾರ್ಯದರ್ಶಿ ಬಾಬುಮೋನ್ ಚೆಂಗಳ ಉಪಸ್ಥಿತರಿದ್ದರು. ಓಮನಾ ಮಾಧವನ್ ಪರವನಡ್ಕ ಸ್ವಾಗತಿಸಿದರು. ಗೀತಾ ಬಾಲಕೃಷ್ಣನ್ ವಂದಿಸಿದರು. ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.