ಪ್ರಸೂತಿ, ಸ್ತ್ರೀರೋಗ ಶಾಸ್ತ್ರಜ್ಞರ ಸಮ್ಮೇಳನ

Health New159
Published on

ಮೈಸೂರು: ನಗರದ ಹೊರವಲಯದಲ್ಲಿರುವ ಸೈಲೆಂಟ್ ಶೋರ್ಸ್ ರೆಸಾರ್ಟ್‌ನಲ್ಲಿ ಆ.9ರಿಂದ ಮೂರು ದಿನಗಳ ಕಾಲ ದಕ್ಷಿಣ ವಲಯ ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರಜ್ಞರ ಸಮ್ಮೇಳನ ನಡೆಯಲಿದೆ ಎಂದು ಸಮ್ಮೇಳನ ಸಮಿತಿ ಅಧ್ಯಕ್ಷೆ ಡಾ.ಸುಧಾ ತಿಳಿಸಿದರು.

ಆ.9ರಂದು ಕಾರ್ಯಾಗಾರ ನಡೆಯಲಿದೆ. 10ರಂದು ಸಂಜೆ 5 ಗಂಟೆಗೆ ಔಪಚಾರಿಕವಾಗಿ ಉದ್ಘಾಟನೆ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಸಮ್ಮೇಳನಕ್ಕೆ ಚಾಲನೆ ನೀಡುವರು. ಹಿರಿಯ ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರಜ್ಞರು ಇದರಲ್ಲಿ ಪಾಲ್ಗೊಂಡು ಕಿರಿಯ ವೈದ್ಯರಿಗೆ ಈ ಕ್ಷೇತ್ರದಲ್ಲಿನ ಇತ್ತೀಚಿನ ಬೆಳವಣಿಗೆ, ತಾವು ಅನುಸರಿಸುವ ವಿಧಾನ ಕುರಿತು ಮಾಹಿತಿ ನೀಡಲಿದ್ದಾರೆ. ಕರ್ನಾಟಕ, ತಮಿಳುನಾಡು, ತೆಲಂಗಾಣ, ಆಂಧ್ರ ಮೊದಲಾದ ರಾಜ್ಯಗಳಿಂದ ಸಾವಿರ ಜನ ವೈದ್ಯರು ಪಾಲ್ಗೊಳಲಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಆಯೋಜಕರಾದ ಡಾ.ಎನ್.ಸುನಂದಾ, ಡಾ.ಸುಷ್ಮಾ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net