17ರಿಂದ ಭಾಷಾಂತರಕಾರರ ಸಮಾವೇಶ

Published on

ಕಾಸರಗೋಡು: ಮಂಜೇಶ್ವರ ಗೋವಿಂದ ಪೈ ಕಾಲೇಜಿನಲ್ಲಿ, ಹಂಪಿ ವಿಶ್ವವಿದ್ಯಾನಿಲಯ ಭಾಷಾಂತರ ಅಧ್ಯಯನ ವಿಭಾಗ ಹಾಗೂ ಗೋವಿಂದ ಪೈ ಕಾಲೇಜಿನ ಕನ್ನಡ ವಿಭಾಗದ ಜಂಟಿ ಆಶ್ರಯದಲ್ಲಿ ಭಾಷಾಂತರಕಾರರ ನಾಲ್ಕನೇ ಸಮಾವೇಶ ಫೆ.17ರಿಂದ 19ರ ವರೆಗೆ ಕಾಲೇಜಿನ ಕ್ಯಾಂಪಸ್ ಸಭಾಂಗಣದಲ್ಲಿ ನಡೆಯಲಿದೆ.

ಫೆ.17ರಂದು ನಾಲ್ಕು ಪುಸ್ತಕಗಳ ಬಿಡುಗಡೆ ನಡೆಯಲಿದ್ದು, ಹಂಪಿ ಕನ್ನಡ ವಿವಿ ಕುಲಪತಿ ಡಾ.ಡಿ.ವಿ.ಪರಮಶಿವ ಮೂರ್ತಿ ಉದ್ಘಾಟಿಸುವರು. ಕಾಲೇಜು ಪ್ರಾಂಶುಪಾಲ ಡಾ.ಮುಹಮ್ಮದಾಲಿ ಅಧ್ಯಕ್ಷತೆ ವಹಿಸುವರು. ಫೆ.18ರಂದು ಬೆಳಗ್ಗೆ ನಾಲ್ಕನೇ ಸಮಾವೇಶವನ್ನು ಹಂಪಿ ಕನ್ನಡ ವಿವಿ ಕುಲಪತಿ ಡಾ.ಡಿ.ವಿ.ಪರಮಶಿವ ಮೂರ್ತಿ ನಿರ್ವಹಿಸಲಿದ್ದು, ಕಾಲೇಜು ಪ್ರಾಚಾರ್ಯ ಡಾ.ಮುಹಮ್ಮದಾಲಿ ಅಧ್ಯಕ್ಷತೆ ವಹಿಸುವರು. ಫೆ.19ರಂದು ಸಮಾರೋಪ ಸಮಾರಂಭದಲ್ಲಿ ಹಂಪಿ ವಿಶ್ವವಿದ್ಯಾನಿಲಯದ ಹಿರಿಯ ಪ್ರಾಧ್ಯಾಪಕ ಡಾ.ಎ.ಮೋಹನ ಕುಂಟಾರ್ ಅಧ್ಯಕ್ಷತೆ ವಹಿಸುವರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net