ಒಕ್ಕೂಟ ಪದಾಧಿಕಾರಿಗಳ ಸಮಾವೇಶ

DWD---MAHILA----SAMAVESH---NEWS
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್​ನ ಧಾರವಾಡ ತಾಲೂಕಿನ ತಾಲೂಕು ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶವು ರಾಯಾಪುರದ ತರಬೇತಿ ಸಂಸ್ಥೆ ಸಭಾಂಗಣದಲ್ಲಿ ಇತ್ತೀಚೆಗೆ ಜರುಗಿತು.
ಪ್ರಾದೇಶಿಕ ನಿರ್ದೇಶಕಿ ದಯಾಶೀಲ ಸಮಾವೇಶ ಉದ್ಘಾಟಿಸಿ ಮಾತನಾಡಿ, ಯೋಜನೆಯ ಪ್ರಗತಿ ಮತ್ತಿತರ ಕಾರ್ಯ ಯೋಜನೆಗಳನ್ನು ವಿವರಿಸಿದರು.
ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯೆ ಸವಿತಾ ಅಮರಶೆಟ್ಟಿ ಅವರು, ಕುಟುಂಬದ ಆರ್ಥಿಕ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರದ ಬಗ್ಗೆ ಮಾಹಿತಿ ನೀಡಿದರು.
ಐಡಿಬಿಐ ಬ್ಯಾಂಕ್​ ಅಧಿಕಾರಿಗಳಾದ ಗಣೇಶ ಪಾಟೀಲ, ಪರಮೇಶ್ವರ ಬಡಿಗೇರ ಅವರು ಬ್ಯಾಂಕಿಂಗ್​ ವ್ಯವಹಾರಗಳ ಬಗ್ಗೆ ಮಾಹಿತಿ ಮತ್ತು ಮಾರ್ಗದರ್ಶನ ನೀಡಿದರು. ಶಂಕರ ಬೆಳ್ಳುಬ್ಬಿ, ಯೋಜನೆ ಜಿಲ್ಲಾ ನಿರ್ದೇಶಕ ಪ್ರದಿಪ್​ ಶೆಟ್ಟಿ, ಯೋಜನಾಧಿಕಾರಿ ಅಶೋಕ ಕೆ., ಚನ್ನಬಸಪ್ಪ, ಸಂತೋಷ, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net