

ಕಡಬ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾನೂನುಬದ್ಧವಾಗಿ ಬ್ಯಾಂಕ್ನ ಸಹಭಾಗಿತ್ವದಲ್ಲಿ ಅಭಿವೃದ್ಧಿ ಕೆಲಸ ಮಾಡುತ್ತಿದ್ದು ವ್ಯವಹಾರಿಕ ಕಾರ್ಯಕ್ರಮಗಳಲ್ಲಿ ಗೊಂದಲ ಬೇಡ. ಸ್ವಸಹಾಯ ಸಂಘಗಳ ಆರ್ಥಿಕ ನಿರ್ವಹಣೆ ಬ್ಯಾಂಕ್ನ ನಿಯಮಗಳಿಗೆ ಬದ್ಧವಾಗಿಯೇ ನಡೆಯುತ್ತದೆ ಎಂದು ಉಡುಪಿ ಪ್ರಾದೇಶಿಕ ಕಚೇರಿ ಪ್ರಾದೇಶಿಕ ನಿರ್ದೇಶಕ ದುಗ್ಗೇಗೌಡ ಹೇಳಿದರು.
ಕಡಬದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಡಬ ತಾಲೂಕು ಒಕ್ಕೂಟದ ಪದಾಧಿಕಾರಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದರು.
ಕಡಬ ತಾಲೂಕು ಪ್ರಗತಿಬಂಧು ಒಕ್ಕೂಟ ಸಮಿತಿ ಅಧ್ಯಕ್ಷ ಸಂತೋಷ್ ಕೇನ್ಯ ಅಧ್ಯಕ್ಷತೆ ವಹಿಸಿದ್ದರು. ಸಮರ್ಥ ಜನಸೇವಾ ಟ್ರಸ್ಟ್ ಅಧ್ಯಕ್ಷ ಗಿರಿಶಂಕರ್ ಸುಲಾಯ ಸಂಪನ್ಮೂಲ ವ್ಯಕ್ತಿಯಾಗಿದ್ದರು. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ನ ನೆಲ್ಲಿಕಟ್ಟೆ ಬ್ರಾಂಚ್ನ ಭವಾನಿ ಬ್ಯಾಂಕ್ನ ವ್ಯವಸ್ಥಾಪಕಿ ಸೌಲಭ್ಯ ಮಾಹಿತಿ ನೀಡಿದರು. ಕಡಬ ಒಕ್ಕೂಟದ ಅಧ್ಯಕ್ಷೆ ನಳಿನಿ ರೈ ಅನಿಸಿಕೆ ವ್ಯಕ್ತಪಡಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್, ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಮಹೇಶ್ ಕೆ.ಸವಣೂರು, ಸದಸ್ಯ ಶಿವಪ್ರಸಾದ್ ರೈ ಮೈಲೇರಿ, ಕಡಬ ಎಸ್ಬಿಐ ಬ್ಯಾಂಕ್ ವ್ಯವಸ್ಥಾಪಕ ಸಂದೀಪ್ ಸಿಂಗ್, ಜಿಲ್ಲಾ ಎಂಐಎಸ್ ಯೋಜನಾಧಿಕಾರಿ ಶಕುಂತಲಾ ಉಪಸ್ಥಿತರಿದ್ದರು.
ತಾಲೂಕು ಯೋಜನಾಧಿಕಾರಿ ಮೇದಪ್ಪಗೌಡ ಎನ್ ಸ್ವಾಗತಿಸಿದರು. ತಾಲೂಕು ಜ್ಞಾನವಿಕಾಸ ಸಮನ್ವಯಾಧಿಕಾರಿ ಚೇತನಾ ವಂದಿಸಿದರು. ಬಿಳಿನೆಲೆ ವಲಯ ಮೇಲ್ವಿಚಾರಕ ರವಿಪ್ರಸಾದ್ ಆಲಾಜೆ ಕಾರ್ಯಕ್ರಮ ನಿರೂಪಿಸಿದರು.