

ಹುಬ್ಬಳ್ಳಿ: ಶ್ರೀಕೃಷ್ಣ ಜನ್ಮಾಷ್ಟಮಿ ನಿಮಿತ್ತ ಉಣಕಲ್ ಬಳಿಯ ಜೆಎಸ್ಎಸ್ ಶ್ರೀ ಮಂಜುನಾಥೇಶ್ವರ ಸೆಂಟ್ರಲ್ ಸ್ಕೂಲ್ನಲ್ಲಿ ಶನಿವಾರ ಯಶೋಧಾ-ಶ್ರೀಕೃಷ್ಣ ಸ್ಪರ್ಧೆ ಏರ್ಪಡಿಸಲಾಗಿತ್ತು.
ಪ್ರಾಂಶುಪಾಲೆ ರಜನಿ ಆರ್. ಪಾಟೀಲ ಮಾತನಾಡಿ, ತಾಯಿ ಮತ್ತು ಮಗುವಿನ ನಡುವೆ ಬಾಂಧವ್ಯ ಬಲಗೊಳಿಸಲು ಈ ಸ್ಪರ್ಧೆ ಆಯೋಜಿಸಲಾಗಿದೆ. ಮಕ್ಕಳಲ್ಲಿ ಆತ್ಮವಿಶ್ವಾಸವೂ ವೃದ್ಧಿಯಾಗಲಿದೆ ಎಂದರು. ಭಾಗವಹಿಸಿದ್ದವರಿಗೆ ಅತ್ಯಾಕರ್ಷಕ ಬಹುಮಾನ ನೀಡಲಾಯಿತು. ಅತಿಥಿಗಳಾಗಿ ಸವಿತಾ ದೀಕ್ಷಿತ, ಯಶಸ್ವಿನಿ ವಿ.ನಾಯಕ್, ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.