ಆತ್ಮವಿಶ್ವಾಸ, ಧೈರ್ಯ ಬೆಳೆಸಿಕೊಳ್ಳಲಿ-ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ನಾಗವೇಣಿ ಪಾಟೀಲ್ ಸಲಹೆ

snd-04
ಸಿಂಧನೂರಿನ ಸರ್ಕಾರಿ ಶಾಲೆಯಲ್ಲಿ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ವಿದ್ಯಾರ್ಥಿನಿಯರಿಗೆ ಕುರ್ಚಿ ಸ್ಪರ್ಧೆ ಏರ್ಪಡಿಸಲಾಗಿತ್ತು.
Published on

ಸಿಂಧನೂರು: ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಮಹಿಳೆಯರಿಗೆ ಇನ್ಫೋಸಿಸ್ ಸುಧಾಮೂರ್ತಿ ಸ್ಫೂರ್ತಿಯಾಗಬೇಕು ಎಂದು ಕಾಂಗ್ರೆಸ್ ಮಹಿಳಾ ಘಟಕ ಜಿಲ್ಲಾಧ್ಯಕ್ಷೆ ಡಾ.ನಾಗವೇಣಿ ಪಾಟೀಲ್ ಹೇಳಿದರು.

ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಹೆಣ್ಣುಮಕ್ಕಳ ಸಾಧನೆಗೆ ನಮಿಸಲು ಮತ್ತು ಅವರ ತ್ಯಾಗ, ಶಕ್ತಿಯನ್ನು ಗೌರವಿಸಲು ಈ ದಿನ ಆಚರಿಸಲಾಗುತ್ತದೆ. ಪ್ರತಿ ಯಶಸ್ವಿ ಗಂಡಿನ ಹಿಂದೆ ತ್ಯಾಗ, ಕರುಣೆ, ಮಮತೆ ತುಂಬಿದ ಹೆಣ್ಣಿನ ಪಾತ್ರ ಪ್ರಮುಖವಾಗಿದೆ. ದೇಶದ ಮೊದಲ ಮಹಿಳಾ ಪ್ರಧಾನಿ ಇಂದಿರಾ ಗಾಂಧಿ ಅವರು ಆಡಳಿತ, ಸಾಹಸ-ಧೈರ್ಯಕ್ಕೆ ಸಾಕ್ಷಿಯಾಗಿದ್ದಾರೆ. ಕ್ರಾಂತಿಕಾರಿ ಯೋಜನೆಗಳ ಮೂಲಕ ದೇಶದ ಸಮಗ್ರ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸಿದ್ದಾರೆ. ವಿದ್ಯಾರ್ಥಿನಿಯರು ಕೂಡ ಆತ್ಮವಿಶ್ವಾಸ, ಧೈರ್ಯವನ್ನು ಬೆಳೆಸಿಕೊಳ್ಳಬೇಕು ಎಂದರು. ಮುಖ್ಯಶಿಕ್ಷಕಿ ಅಡಿವೆಮ್ಮ, ಸೇವಾಸಿರಿ ಟ್ರಸ್ಟ್ ಅಧ್ಯಕ್ಷ ಪ್ರದೀಪ್ ಪೂಜಾರಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net