ಕೇಂದ್ರದ ಜತೆ ಸಂಘರ್ಷ ಒಳ್ಳೆಯದಲ್ಲ: ಎಚ್.ಡಿ.ಕುಮಾರಸ್ವಾಮಿ

ex cm h.d.kumaraswami press meet
ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮಾತನಾಡಿದರು. ಶಿವಮೊಗ್ಗ ಲೋಕಸಭೆ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ, ಶಾಸಕರಾದ ಶಾರದಾ ಪೂರ್ಯಾನಾಯ್ಕ್ ಇದ್ದರು.
Published on

ಶಿವಮೊಗ್ಗ: ರಾಜ್ಯ ಸರ್ಕಾರ ಪ್ರತಿಯೊಂದು ವಿಚಾರಕ್ಕೂ ಕೇಂದ್ರದ ಜತೆ ಸಂಘರ್ಷ ನಡೆಸುವುದು ಒಳ್ಳೆಯ ಬೆಳವಣಿಗೆಯಲ್ಲ. ಸಂಘರ್ಷ ಬಿಟ್ಟು ಕೇಂದ್ರದಿಂದ ಬಿಡುಗಡೆ ಆಗಿರುವ ಬರ ಪರಿಹಾರ ವಿತರಣೆಗೆ ಮುಂದಾಗಬೇಕಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸಲಹೆ ನೀಡಿದರು.

ರಾಜ್ಯ ಕಾಂಗ್ರೆಸ್ ರೈತರ ಸಂಕಷ್ಟಕ್ಕೆ ಕ್ರಮ ತೆಗೆದುಕೊಳ್ಳದೆ ಕೇಂದ್ರ ಸರ್ಕಾರದ ಜತೆ ಸಂಘರ್ಷ ಮಾಡುತ್ತಿದೆ. ಸರ್ಕಾರದ ಬರ ಪರಿಹಾರ ಘೋಷಣೆಗೆ ಸೀಮಿತವಾಗಿದೆ. ತಲಾ 2 ಸಾವಿರ ರೂ. ಇನ್ನೂ ಅನೇಕರಿಗೆ ತಲುಪಿಲ್ಲ. ಒಟ್ಟಾರೆ ಸರ್ಕಾರದ ಮುಂದೆ ಗ್ಯಾರಂಟಿ ಭಜನೆ ಬಿಟ್ಟು ಬೇರೆ ಯಾವುದೇ ವಿಷಯವಿಲ್ಲ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
ಕೇಂದ್ರದ ತಂಡ ಬರ ಅಧ್ಯಯನ ನಡೆಸಿ ಹಣ ಬಿಡುಗಡೆ ಮಾಡಲಿಲ್ಲವೆಂದು ರಾಜ್ಯ ಸರ್ಕಾರ ಆರೋಪಿಸಿತ್ತು. ಅದಕ್ಕೂ ಮುನ್ನ ನನ್ನ ತೆರಿಗೆ ನನ್ನ ಹಕ್ಕು ಎಂದು ಪ್ರತಿಭಟನೆ ನಡೆಸಿತ್ತು. ಕೇಂದ್ರ ಹಾಗೂ ಪ್ರಧಾನಿ ನರೇಂದ್ರ ಮೋದಿ ಮೇಲೆ ವಾಗ್ದಾಳಿ ನಡೆಸಿ ಸಂಘರ್ಷ ಮಾಡಿಕೊಳ್ಳುತ್ತಿದ್ದಾರೆ. ಈಗಾಗಲೇ ರಾಜ್ಯದ ಹಲವೆಡೆ ಮೇವಿನ ಕೊರತೆ ಉಂಟಾಗಿದೆ. 7,800 ಹಳ್ಳಿಗಳಿಗೆ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದರೂ ಪರಿಹಾರ ಕಂಡುಕೊಂಡಿಲ್ಲ. ರೈತರ ಸಂಕಷ್ಟಗಳಿಗೆ ಪ್ರಾಮಾಣಿಕ ಸ್ಪಂದನೆ ಸಿಗುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.
ಶಿವಮೊಗ್ಗ ಲೋಕಸಭೆ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ, ಶಾಸಕರಾದ ಶಾರದಾ ಪೂರ‌್ಯಾನಾಯ್ಕ, ಎಸ್.ಎನ್.ಚನ್ನಬಸಪ್ಪ, ಎಂಎಲ್‌ಸಿ ಎಸ್.ಎಲ್.ಭೋಜೇಗೌಡ, ಮಾಜಿ ಶಾಸಕರಾದ ರಘುಪತಿ ಭಟ್, ಕೆ.ಬಿ.ಪ್ರಸನ್ನಕುಮಾರ್, ಕೆ.ಜಿ.ಕುಮಾರಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಜೆಡಿಎಸ್ ಜಿಲ್ಲಾಧ್ಯಕ್ಷ ಕಡಿದಾಳ್ ಗೋಪಾಲ್ ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net