ಕಾಂಗ್ರೆಸ್ ವಿರುದ್ಧ ಹತಾಶೆಯ ಹೇಳಿಕೆ

25mdk12
Published on

ಮಡಿಕೇರಿ:

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿರುವುದನ್ನು ಕೆಲವರಿಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಹಾಗಾಗಿ ಹತಾಶರಾಗಿ ಕಾಂಗ್ರೆಸ್ ವಿರುದ್ಧ ಬೇಕಾಬಿಟ್ಟಿ ಹೇಳಿಕೆ ನೀಡುವ ಪ್ರಯತ್ನ ನಡೆದಿದೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು ಹೇಳಿದರು. ಹಾರಂಗಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಹತಾಶರಾಗಿ ಕಾಂಗ್ರೆಸ್ ವಿರುದ್ಧ ವದಂತಿಗಳನ್ನು ಹಬ್ಬಿಸಲಾಗುತ್ತಿದೆ. ಸರ್ಕಾರದಲ್ಲಿ ಯಾವುದೇ ಗೊಂದಲ, ಭಿನ್ನಾಭಿಪ್ರಾಯಗಳಿಲ್ಲ. ಎಲ್ಲವೂ ಸರಿಯಾಗಿದೆ. ಸಿಂಗಾಪುರದಲ್ಲಿ ಸಭೆ ನಡೆಸಿ ರಾಜ್ಯದ ಕಾಂಗ್ರೆಸ್ ಸರ್ಕಾರ ಉರುಳಿಸಲು ನಡೆದಿರುವ ಸಭೆಯ ಬಗ್ಗೆ ನನಗೆ ಮಾಹಿತಿಯಿಲ್ಲ ಎಂದರು. ಇದೇ ವೇಳೆ ಪ್ರತಿಕ್ರಿಸಿದ ಮಡಿಕೇರಿ ಶಾಸಕ ಡಾ. ಮಂತರ್ ಗೌಡ, ಕಾಂಗ್ರೆಸ್ ಶಾಸಕರು, ಸಚಿವರಲ್ಲಿ ಭಿನ್ನಾಭಿಪ್ರಾಯಗಳಿಲ್ಲ. ಗುರುವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net