ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಪಾದಯಾತ್ರೆ

CONG RALLY
Published on

ಹುಬ್ಬಳ್ಳಿ: ಕಾಂಗ್ರೆಸ್ ನೇತಾರ ರಾಹುಲ ಗಾಂಧಿ ನೇತೃತ್ವದಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯ ವರ್ಷಾಚರಣೆ ನಿಮಿತ್ತ ಹುಬ್ಬಳ್ಳಿಯಲ್ಲಿ ಗುರುವಾರ ಪಾದಯಾತ್ರೆ ಆಯೋಜಿಸಲಾಗಿತ್ತು.

ವಿದ್ಯಾನಗರ ಕಿಮ್್ಸ ಎದುರಿನ ರಾಷ್ಟ್ರಪಿತ ಮಹಾತ್ಮ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಪಾದಯಾತ್ರೆ ಆರಂಭಿಸಿದ ಕಾಂಗ್ರೆಸ್ ಕಾರ್ಯಕರ್ತರು, ಕಿತ್ತೂರ ಚನ್ನಮ್ಮ ವೃತ್ತದಲ್ಲಿ ಕೊನೆಗೊಳಿಸಿದರು. ಜೋಡೋ ಜೋಡೋ..ಭಾರತ್ ಜೋಡೋ ಘೊಷಣೆ ಕೂಗಿದರು.

ವಿಧಾನ ಪರಿಷತ್ ಸದಸ್ಯ ಜಗದೀಶ ಶೆಟ್ಟರ್, ಮಾಜಿ ಸಚಿವ ಎ.ಎಂ. ಹಿಂಡಸಗೇರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸದಾನಂದ ಡಂಗನವರ, ಅನಿಲಕುಮಾರ ಪಾಟೀಲ, ಮೆಹಮೂದ್ ಕೊಳೂರ, ಗಂಗಾಧರ ದೊಡ್ಡವಾಡ, ರವಿಕುಮಾರ ಬಡ್ನಿ, ಇತರರು ಇದ್ದರು.

ಹು-ಧಾ ಮಹಾನಗರ ಹಾಗೂ ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿಗಳು ಆಯೋಜಿಸಿದ್ದವು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net