ಗೂಂಡಾ ವರ್ತನೆಗೆ ಕಡಿವಾಣ ಹಾಕಲಾಗುವುದು

CONG press meet
Published on

ಮಡಿಕೇರಿ:

ಮಡಿಕೇರಿ ನಗರದಲ್ಲಿ ಕೆಲವು ಬಿಜೆಪಿ ಪ್ರತಿನಿಧಿಗಳ ಗೂಂಡಾ ವರ್ತನೆ ಮುಂದುವರೆದಿದ್ದು, ಸರ್ಕಾರ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ ಹೇಳಿದ್ದಾರೆ. ರಾಜಾಸೀಟ್ ಸುತ್ತಮುತ್ತಲು ಪಾರ್ಕಿಂಗ್ ಶುಲ್ಕ ವಸೂಲಾತಿ ಸಂಬAಧ ಕೆಲವರ ಮೇಲೆ ಮೇಲೆ ಹಲ್ಲೆ ಮಾಡಲಾಗಿದೆ. ಅಕ್ರಮ ಮಳಿಗೆಗಳನ್ನು ನಿರ್ಮಿಸಿದ ಆರೋಪವೂ ಈ ಹಲ್ಲೆಕೋರರ ಮೇಲೆ ಇದೆ. ಗೂಂಡಾ ವರ್ತನೆಯಲ್ಲಿ ತೊಡಗಿರುವವರು ಅಕ್ರಮ ಮಳಿಗೆಗಳನ್ನು ನಿರ್ಮಿಸಿ ಬಾಡಿಗೆಗೆ ನೀಡಿರುವ ಬಗ್ಗೆ ದೂರುಗಳಿದೆ. ಬಿಜೆಪಿ ಅಧಿಕಾರ ಕಳೆದುಕೊಂಡು 2 ವರ್ಷಗಳಾದರೂ ಹಿಂದಿನಿAದಲೂ ರೂಢಿಸಿಕೊಂಡು ಬಂದಿರುವ ರೌಡಿಸಂ, ಭ್ರಷ್ಟಾಚಾರ ಹಾಗೂ ಅಕ್ರಮ ವ್ಯವಹಾರ ಕೆಲವರಿಂದ ಮುಂದುವರೆದಿದೆ. ಇದರ ಮುಂದುವರಿದ ಭಾಗವಾಗಿ ರಾಜಾಸೀಟು ರಸ್ತೆಯಲ್ಲಿ ಪಾರ್ಕಿಂಗ್ ಶುಲ್ಕ ವಸೂಸು ಮಾಡುವವರು ಮೇಲೆ ಹಲ್ಲೆ ನಡೆದಿದೆ. ಹಲ್ಲೆ ಮಾಡಿದವರನ್ನು ಪೊಲೀಸರು ಕಾನೂನು ಪ್ರಕಾರ ಬಂಧಿಸಿದ್ದಾರೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಬಿಜೆಪಿ ಸುಸಂಸ್ಕೃತರ ಪಕ್ಷ ಎಂದು ಹೇಳಿಕೊಳ್ಳುತ್ತಿದೆ ಮಾಜಿ ಶಾಸಕರುಗಳು ತಮ್ಮ ಪಕ್ಷದೊಳಗಿರುವವರ ಪುಂಡಾಟಿಕೆಗೆ ಕಡಿವಾಣ ಹಾಕಬೇಕು. ಅಕ್ರಮ ವ್ಯವಹಾರದ ವಿರುದ್ಧ ಸರ್ಕಾರ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಿದೆ ಎಂದರು.

ಜಿಲ್ಲೆಯ ಅಭಿವೃದ್ಧಿ ಕೆಲಸಗಳು ಮುಂದುವರಿದಿದ್ದು ವಿವಿಧ ಮೂಲಗಳಿಂದ 90 ಕೋಟಿ ರೂ. ಅನುದಾನ ಬಂದಿದೆ. ಭಾಗಮಂಡಲ ರಸ್ತೆಯ ಒಂದು ಹಂತದ ಕಾಮಗಾರಿಗೆ 4 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ. ಈಗಾಗಲೇ ಭೂಮಿಪೂಜೆ ನೆರವೇರಿಸಲಾಗಿದೆ. ಮಡಿಕೇರಿಯಿಂದ ಭಾಗಮಂಡಲದವರೆಗಿನ ಸಂಪೂರ್ಣ ರಸ್ತೆ ಮುಂದಿನ ಜನವರಿಯೊಳಗೆ ಅಭಿವೃದ್ಧಿಯಾಗಲಿದೆ ಎಂದರು.

ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಟಿ.ಪಿ. ರಮೇಶ್ ಮಾತನಾಡಿ ನಗರಕ್ಕೆ ಆಗಮಿಸುತ್ತಿರುವ ಪ್ರವಾಸಿಗರ ಸಂಖ್ಯೆಗೆ ಅನುಗುಣವಾಗಿ ಮೂಲಭೂತ ಸೌಲಭ್ಯ ಕಲ್ಪಿಸಬೇಕಾಗಿದೆ. ಶಾಸಕರು ಮತ್ತು ಸರ್ಕಾರದ ಗಮನ ಸೆಳೆದು ನಗರದಲ್ಲಿ ಸುಸಜ್ಜಿತ ಪಾರ್ಕಿಂಗ್ ಕಾಂಪ್ಲೆಕ್ಸ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ನಗರ ಕಾಂಗ್ರೆಸ್ ಉಪಾಧ್ಯಕ್ಷ ಪ್ರಕಾಶ್ ಆಚಾರ್ಯ ಮಾತನಾಡಿ, ನಗರ ಬಿಜೆಪಿ ಮನೆಯೊಂದು ಮೂರು ಬಾಗಿಲಾಗಿದೆ. ನಗರದ ಜನತೆ ಅತೀ ನಿರೀಕ್ಷೆಯಿಂದ ನಗರಸಭೆಯಲ್ಲಿ 16 ಸ್ಥಾನಗಳನ್ನು ಬಿಜೆಪಿಗೆ ಒದಗಿಸಿಕೊಟ್ಟರು. ಆದರೆ ಅಧಿಕಾರಕ್ಕೆ ಬಂದ ಬಿಜೆಪಿ ಕಳೆದ ಎರಡೂವರೆ ವರ್ಷಗಳ ಕಾಲ ಯಾವುದೇ ಅಭಿವೃದ್ಧಿ ಕಾರ್ಯ ಕೈಗೊಂಡಿಲ್ಲ ಎಂದು ಆರೋಪಿಸಿದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೊಲ್ಯದ ಗಿರೀಶ್, ಮುನೀರ್ ಅಹ್ಮದ್, ಸಾಮಾಜಿಕ ಜಾಲತಾಣದ ಮುಖ್ಯಸ್ಥ ಸೂರಜ್ ಹೊಸೂರು ಸುದ್ದಿಗೋಷ್ಠಿಯಲ್ಲಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net