ಮಂಡ್ಯದ ಮೂವರು ಶಿಕ್ಷಕರಿಗೆ ಸನ್ಮಾನ: ಬೆಂಗಳೂರಿನ ಆದಿಚುಂಚನಗಿರಿ ಮಠದಲ್ಲಿ ಆಯೋಜಿಸಿದ್ದ ಸಮಾರಂಭ

Congratulation ceremony for good teachers mandya
Published on

ಮಂಡ್ಯ: ಬೆಂಗಳೂರಿನ ಮಹಾಲಕ್ಷ್ಮೀಪುರಂನಲ್ಲಿರುವ ಬಿಜಿಎಸ್ ಪಿಯು ಕಾಲೇಜಿನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಮಂಡ್ಯ ಜಿಲ್ಲೆಯ ಮೂವರು ಶಿಕ್ಷಕರನ್ನು ಅಭಿನಂದಿಸಲಾಯಿತು.

ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಹಾಗೂ ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕರ ವೇದಿಕೆ ಸಹಯೋಗದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ನಿವೃತ್ತ ಉಪನ್ಯಾಸಕ ಹೊಳಲು ಶ್ರೀಧರ್, ದುದ್ದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಟಿ.ವೀಣಾ ಮತ್ತು ವಿ.ಸಿ ಫಾರ್ಮ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಕನ್ನಡ ಶಿಕ್ಷಕಿ ಬಿ.ಸಿ.ರಜನಿ ಅವರನ್ನು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥಸ್ವಾಮೀಜಿ ಸನ್ಮಾನಿಸಿ ಆಶೀರ್ವಚನ ನೀಡಿದರು.

ಇದೇ ವೇಳೆ ಮೈಸೂರು ಭಾರತೀಯ ಭಾಷಾ ಸಂಸ್ಥಾನದ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರದ ಯೋಜನಾ ನಿರ್ದೇಶಕ ಪ್ರೊ.ಡಾ.ನೀಲಗಿರಿ ತಳವಾರ್ ಪ್ರಶಸ್ತಿ ಶಿಕ್ಷಕರ ಸಾಧನೆಯ ಪುಸ್ತಕ ಕುರಿತು ಮಾತನಾಡಿದರು. ಬೆಂಗಳೂರು ವಿವಿ ವಿಶ್ರಾಂತ ಉಪಕುಲಪತಿ ಪ್ರೊ.ಬಿ.ತಿಮ್ಮೇಗೌಡ ಪ್ರಶಸ್ತಿ ಶಿಕ್ಷಕರ ಸಾಧನೆಯ ಪುಸ್ತಕ ಬಿಡುಗಡೆ ಮಾಡಿದರು.

ವೇದಿಕೆ ಸಂಸ್ಥಾಪಕ ಅಧ್ಯಕ್ಷ ಅಪ್ಪಾಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮಾನಂದನಾಥ ಸ್ವಾಮೀಜಿ, ಆಡಳಿತಾಧಿಕಾರಿ ಶಿವರಾಮರೆಡ್ಡಿ, ಶಿವರಾಮು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net