ಅವಕಾಶ ಬಳಸಿಕೊಂಡು ವಿದ್ಯಾರ್ಥಿಗಳು ಉಜ್ವಲ ಭವಿಷ್ಯ ರೂಪಿಸಿಕೊಳ್ಳಿ: ಎಸ್.ಬಿ ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ಡಾ.ಬಿ.ಶಿವಲಿಂಗಯ್ಯ ಸಲಹೆ

Congratulation ceremony for students mandya
Published on

ಮಂಡ್ಯ: ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ಮುಗಿಸಿರುವ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉಜ್ವಲ ರೂಪಿಸಿಕೊಳ್ಳಲು ಶ್ರಮ ಪಡಬೇಕು ಎಂದು ಎಸ್.ಬಿ ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ಡಾ.ಬಿ.ಶಿವಲಿಂಗಯ್ಯ ಸಲಹೆ ನೀಡಿದರು.

ನಗರದ ಮಾಂಡವ್ಯ ಇಂಟಿಗ್ರೇಟೆಡ್ ಶಿಕ್ಷಣ ಸಂಸ್ಥೆಯಲ್ಲಿ ಆಯೋಜಿಸಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿ ಗಳಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಿ ಮಾತನಾಡಿದ ಅವರು, ಎಸ್ಸೆಸ್ಸೆಲ್ಸಿ ಪರೀಕ್ಷೆ ತುಂಬಾ ಕಠಿಣವಾಗಿ ನಡೆದಿದ್ದು, ನಮ್ಮ ಸಂಸ್ಥೆಯ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಗಳಿಸಿದ್ದಾರೆ. ಮುಂದೆ ಉತ್ತಮ ಕ್ರಿಯಾಶೀಲ ವ್ಯಕ್ತಿಯಾಗಿ ಜವಾಬ್ದಾರಿಯುತ ಸ್ಥಾನವನ್ನು ಪಡೆದುಕೊಳ್ಳಬೇಕು ಎಂದರು.

ಸಂಸ್ಥೆಯ ಕಾರ್ಯದರ್ಶಿ ಡಾ.ಮೀರಾ ಶಿವಲಿಂಗಯ್ಯ ಮಾತನಾಡಿ, ವಿದ್ಯಾರ್ಥಿಗಳು ತೆಗೆದುಕೊಂಡಿರುವ ಫಲಿತಾಂಶ ಸಂಸ್ಥೆಗೆ ಕೀರ್ತಿ ತಂದಿದೆ. ಇದಕ್ಕೆ ಸಹಕರಿಸಿದ ಎಲ್ಲ ಉಪನ್ಯಾಸಕರು, ವಿದ್ಯಾರ್ಥಿಗಳು ಮತ್ತು ಪಾಲಕರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಅಂತೆಯೇ ತಮ್ಮ ಮುಂದಿನ ವಿದ್ಯಾಭ್ಯಾಸವನ್ನು ನಮ್ಮ ಸಂಸ್ಥೆಯಲ್ಲೇ ಮುಂದುವರಿಸಿ ವಿಶೇಷ ಸ್ಕಾಲರ್ಶಿಪ್ ನೀಡಲು ಸಮ್ಮತಿಸಿದರು.

ಮುಖ್ಯ ಶಿಕ್ಷಕ ಮಹಾದೇವಯ್ಯ, ಕಾಲೇಜಿನ ಶೈಕ್ಷಣಿಕ ಪಾಲುದಾರ ಅವಿನಾಶ್, ಪ್ರಾಂಶುಪಾಲ ಚಂದ್ರಶೇಖರ್, ಮೋಹನ್, ಡಿ.ಎಸ್.ರಾಘವೇಂದ್ರ, ಚನ್ನೇಶ, ರಂಗಸ್ವಾಮಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net