ಅಭಿನಂದನಾ ಸಮಾರಂಭ 16ರಂದು

WEB LOGO
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಮುಮ್ಮಿಗಟ್ಟಿ ಗ್ರಾಮದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ ಪರಿವಾರಗಳಿಗೆ ಜನಸಾಗರ ಸಾಹಿತ್ಯ, ಕಲಾ ಮತ್ತು ಸಾಂಸ್ಕೃತಿಕ ಸಂಸ್ಥೆ ವತಿಯಿಂದ ಸೆ. 16ರಂದು ಗ್ರಾಮದ ರಂಗ ಮಂದಿರದಲ್ಲಿ ಮಧ್ಯಾಹ್ನ 2 ಗಂಟೆಗೆ ಬಹುಮಾನ ವಿತರಣೆ ಹಾಗೂ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದೆ ಎಂದು ಆಯೋಜಕ ಚಿದಾನಂದ ಪತ್ತಾರ ತಿಳಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾದವಾಡದ ಸಿದ್ದಾರೂಢ ಮಠದ ಆನಂದ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಹೆಸ್ಕಾಂ ತಾಂತ್ರಿಕ ನಿರ್ದೇಶಕ ಎಸ್​.ಜಗದೀಶ ಕಾರ್ಯಕ್ರಮ ಉದ್ಘಾಟಿಸುವರು. ಅತಿಥಿಗಳಾಗಿ ರಾಜೇಸಾಬ ತಾಳೊಕೋಟಿ, ಮಂಜುನಾಥ ಟಿಂಗರಿಕರ, ಗುಜ್ಜಾರ ಎ.ಎಂ., ಜಯಶ್ರೀ ಗೌಳಿಯವರ ಆಗಮಿಸಲಿದ್ದಾರೆ. ಪುಂಡಲಿಕಪ್ಪ ಭಟ್ಟಂಗಿ ಅಧ್ಯಕ್ಷತೆ ವಹಿಸುವರು ಎಂದರು.
ಆಯ್ಕೆಯಾದ ಗಣೇಶ ಮೂರ್ತಿಗಳಿಗೆ ಬಹುಮಾನ, ಪ್ರಮಾಣಪತ್ರ ನೀಡಿ ಗೌರವಿಸಲಾಗುವುದು. ನಂತರ ಸಂಗೀತ, ಜನಪದ, ಕಾರ್ಯಕ್ರಮಗಳು ಜರುಗಲಿವೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net