ಬೆಳ್ತಂಗಡಿ ಮಹಿಳಾ ಕಾಂಗ್ರೆಸ್‌ನಿಂದ ಅಭಿನಂದನೆ

New Project (17)
Published on

ಬೆಳ್ತಂಗಡಿ: ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ನಮಿತಾ ಪೂಜಾರಿ ಅವರಿಗೆ ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ವತಿಯಿಂದ ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಸಭಾಂಗಣದಲ್ಲಿ ಅಭಿನಂದನೆ ಸಲ್ಲಿಸಲಾಯಿತು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಪದ್ಮನಾಭ ಸಾಲಿಯನ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಶೇಖರ್ ಕುಕ್ಕೆಡಿ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ಪಕ್ಷದ ಪ್ರಮುಖರಾದ ಲೋಕೇಶ್ವರಿ ವಿನಯ ಚಂದ್ರ ಗೌಡ, ನಾರಾಯಣ ಗೌಡ ದೇವಸ್ಯ, ಶೋಭಾ ನಾರಾಯಣ ಗೌಡ, ಯುವ ಕಾಂಗ್ರೆಸ್ ಅಧ್ಯಕ್ಷ ಅಝರ್ ನಾವುರು, ಉಪಾಧ್ಯಕ್ಷ ಅರುಣ್ ಲೋಬೊ, ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಝೀನತ್, ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳಾದ ಮಧುರ ರಾಘವ, ಸುಮಂಗಲ ಉಜಿರೆ, ಪುಷ್ಪಾ ನೆರಿಯಾ, ವಿಜಯಲಕ್ಷ್ಮೀ, ಸದಸ್ಯರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net