ಹಳೇ ಪಿಂಚಣಿ ಯೋಜನೆ ಜಾರಿಗೆ ಅಭಿನಂದನೆ

26 Dwd 2 (Basavaraj Gurikar)
Published on

ಧಾರವಾಡ: ಸರ್ಕಾರ 2006ರ ಏ. 1ರ ಪೂರ್ವದಲ್ಲಿ ಹೊರಡಿಸಿದ ಅಽಸೂಚನೆ ಅಡಿ ಸರ್ಕಾರಿ ಸೇವೆಗೆ ಹಾಜರಾದವರಿಗೆ ಹಳೇ ಪಿಂಚಣಿ ಯೋಜನೆ ಜಾರಿಗೊಳಿಸುವ ಸಂಬ0ಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರಿಂದ ರಾಜ್ಯದ 11,364 ಸರ್ಕಾರಿ ನೌಕರರಿಗೆ ಅನುಕೂಲವಾಗಲಿದೆ. ಸರ್ಕಾರದ ಕ್ರಮ ಅಭಿನಂದನೀಯ ಎಂದು ಕೆಪಿಸಿಸಿ ಶಿಕ್ಷಕರ ಘಟಕದ ರಾಜ್ಯ ಅಧ್ಯಕ್ಷ ಬಸವರಾಜ ಗುರಿಕಾರ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇನ್ನುಳಿದ ರಾಜ್ಯ ಸರ್ಕಾರಿ ನೌಕರರಿಗೂ ಹಳೇ ಪಿಂಚಣಿ ಯೋಜನೆಯನ್ನು ಸರ್ಕಾರ ಜಾರಿಗೊಳಿಸಲಿದೆ. ಸರ್ಕಾರಿ ನೌಕರರು ಯÁವುದೇ ಗೊಂದಲಗಳಿಗೆ ಒಳಗಾಗಬಾರದು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಽಕಾರಕ್ಕೆ ಬಂದ ನಂತರ ೫ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿದೆ. ಅದೇರೀತಿ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯನ್ನೂ ಈಡೇರಿಸಲಿದೆ ಎಂಬ ವಿಶ್ವಾಸ ಇದೆ ಎಂದು ಗುರಿಕಾರ ತಿಳಿಸಿದರು.
ಕಾಂಗ್ರೆಸ್ ಜಾತ್ಯತೀತ ಪಕ್ಷ. ನಮ್ಮ ಪಕ್ಷಕ್ಕೆ ಜಗದೀಶ ಶೆಟ್ಟರ್ ಅವರಂಥ ಸಜ್ಜನ ವ್ಯಕ್ತಿ ಬಂದರು ಎಂದು ಸಂತೋಷವಾಗಿತ್ತು. ಅವರು ಮರಳಿ ಬಿಜೆಪಿಗೆ ಹೋಗಿದ್ದಾರೆ. ಅದು ಅವರ ವೈಯಕ್ತಿಕ ನಿರ್ಧಾರ ಎಂದರು.
ನಾನು ಸಂಘಟನೆಯಲ್ಲಿ ಇದ್ದವನು. ಈ ಬಾರಿಯ ಲೋಕಸಭಾ ಟಿಕೆಟ್ ಕೇಳಿದ್ದೇನೆ. ನನ್ನ ಕಾರ್ಯವನ್ನು ಗುರುತಿಸಿ ಪಕ್ಷ ಟಿಕೆಟ್ ನೀಡಲಿದೆ ಎಂಬ ವಿಶ್ವಾಸ ಇದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net