ವಿದ್ಯಾರ್ಥಿಗಳಿಗೆ ಶುಭಾಶಂಸನಾ ಕಾರ್ಯಕ್ರಮ

venka
Published on

ಕುಂದಾಪುರ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 2024-25ನೇ ಸಾಲಿನ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಶುಭಾಶಂಸನಾ ಕಾರ್ಯಕ್ರಮ ಶನಿವಾರ ನಡೆಯಿತು. ಸಂಸ್ಥೆ ಕಾರ್ಯದರ್ಶಿ ಕೆ.ರಾಧಾಕೃಷ್ಣ ಶೆಣೈ ಅಧ್ಯಕ್ಷತೆ ವಹಿಸಿದ್ದರು. ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಸಂದೀಪ ಗಾಣಿಗ ಮಕ್ಕಳಿಗೆ ಶುಭಹಾರೈಸಿದರು. ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ರೇಷ್ಮಾ ಡಿಸೋಜ, ನರ್ಸರಿ ವಿಭಾಗ ಮುಖ್ಯ ಶಿಕ್ಷಕಿ ಪ್ರಮೀಳಾ ಡಿಸೋಜ ಹಾಗೂ ಪದವಿ ಪೂರ್ವ ಕಾಲೇಜು ಉಪಪ್ರಾಂಶುಪಾಲ ಸುಜಯ್ ಕೋಟೆಗಾರ್ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ಕೃಷ್ಣ ಅಡಿಗ ಸ್ವಾಗತಿಸಿದರು. ಸಂಗೀತ ಶಿಕ್ಷಕಿ ರಮಣಿ ಪ್ರಾರ್ಥಿಸಿದರು. ಪ್ರೌಢಶಾಲಾ ಸಹಶಿಕ್ಷಕಿ ಪ್ರತಿಭಾ ಪೈ ಕಾರ್ಯಕ್ರಮ ನಿರೂಪಿಸಿದರು. ಪ್ರೌಢಶಾಲಾ ಸಹಶಿಕ್ಷಕಿ ಆಶಾ ಬಾಯಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net