ಜಿ.ಕೆ ಶೆಟ್ಟಿಗೆ ಕಸಾಪದಿಂದ ಅಭಿನಂದನೆ

sanmna
Published on

ಕಾಸರಗೋಡು: ಕನ್ನಡ ಭಾಷೆ, ಸಂಸ್ಕೃತಿಗಳಿಗೆ ಅಮೂಲ್ಯ ಕೊಡುಗೆ ನೀಡಿದ ಹಿರಿಯ ಸಾಧಕರನ್ನು ಅವರ ಮನೆಯಂಗಳದಲ್ಲಿ ಗೌರವಿಸುವ ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ‘ಸಾಹಿತ್ಯ ಪರಿಷತ್ತಿನ ನಡಿಗೆ ಹಿರಿಯ ಸಾಧಕರ ಕಡೆಗೆ’ ಎಂಬ ಕಾರ್ಯಕ್ರಮದ ಅಂಗವಾಗಿ ಹಿರಿಯ ಕನ್ನಡ ಧುರೀಣ, ರಂಗತಜ್ಞ, ನಿವೃತ್ತ ಉಪಜಿಲ್ಲಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ(ಜಿ.ಕೆ ಶೆಟ್ಟಿ)ಅವರನ್ನು ಕಾಸರಗೋಡಿನ ಕೇಳುಗುಡ್ಡೆಯಲ್ಲಿರುವ ಅವರ ನಿವಾಸದಲ್ಲಿ ಅಭಿನಂದಿಸಲಾಯಿತು.

ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕ ಅಧ್ಯಕ್ಷ ಡಾ.ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ, ಜಿ.ಕೆ ಶೆಟ್ಟಿ ಅವರನ್ನು ಅಭಿನಂದಿಸಿದರು.

ಹಿರಿಯ ರಂಗಕರ್ಮಿ ಕೆ.ಸುಬ್ಬಣ್ಣ ಶೆಟ್ಟಿ ಅಭಿನಂದನಾ ಭಾಷಣ ಮಾಡಿದರು. ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಸಂಘಟನಾ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ, ನಿವೃತ್ತ ಮುಖ್ಯಶಿಕ್ಷಕ ರಾಜಾರಾಮ ರಾವ್ ಮೀಯಪದವು, ಸುನೀಲ್ ಚಂದ್ರ ಆಳ್ವ, ಚಿತ್ರಲೇಖಾ, ಉದಯ ಕುಮಾರ ರೈ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net