20ಕ್ಕೆ ಎಚ್.ವಿಶ್ವನಾಥ್ ಶಾಂತಮ್ಮ ದಂಪತಿಗೆ ಅಭಿನಂದನೆ

17 H.VISHVANATH-1
ಹೆಚ್.ವಿಶ್ವನಾಥ್
Published on

ಕೆ.ಆರ್.ನಗರ: ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಮತ್ತು ಶಾಂತಮ್ಮ ವಿಶ್ವನಾಥ್ ದಂಪತಿಯ 50ನೇ ವರ್ಷದ ವಿವಾಹ ವಾರ್ಷಿಕೋತ್ಸವ ಸಮಾರಂಭ ಏ.20ರಂದು ಆಯೋಜಿಸಲಾಗಿದೆ.

ಅಂದು ಬೆಳಗ್ಗೆ 10 ಗಂಟೆಗೆ ಪಟ್ಟಣದ ಸಿ.ಎಂ. ರಸ್ತೆಯ ಕೃಷ್ಣ ಮಂದಿರದ ಸಮೀಪದಲ್ಲಿರುವ ಶ್ರೀ ಚಂದ್ರಮೌಳೇಶ್ವರ ದೇವಾಲಯದಲ್ಲಿ ಎಚ್.ವಿಶ್ವನಾಥ್ ಅವರ ಅಭಿಮಾನಿಗಳು, ಹಿತೈಷಿಗಳು, ದೇವಾಲಯದ ಭಕ್ತಾದಿಗಳು ಮತ್ತು ವಿಶ್ವಾಸಿಗರು ಈ ಕಾರ್ಯಕ್ರಮ ಆಯೋಜಿಸಿದ್ದಾರೆ.

ಎಚ್.ವಿಶ್ವನಾಥ್ ದಂಪತಿಗೆ ಶುಭ ಹಾರೈಸಿದ ನಂತರ ಅವರ ಹೆಸರಿನಲ್ಲಿ ಮಧ್ಯಾಹ್ನ 12 ಗಂಟೆಗೆ ದೇವರಿಗೆ ಮಹಾಮಂಗಳಾರತಿ, ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಲಾಗುವುದು. ನಂತರ ದೇವಾಲಯದ ಜೀರ್ಣೋದ್ಧಾರಕ್ಕೆ ವಿಧಾನ ಪರಿಷತ್ತಿನ ಸದಸ್ಯರ ನಿಧಿಯಿಂದ 3.5 ಲಕ್ಷ ರೂ. ಅನುದಾನ ನೀಡಿರುವ ಎಚ್.ವಿಶ್ವನಾಥ್ ಅವರನ್ನು ಸನ್ಮಾನಿಸಲಾಗುತ್ತದೆ.

ಈ ಕಾರ್ಯಕ್ರಮಕ್ಕೆ ಎಚ್.ವಿಶ್ವನಾಥ್ ಅವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ವೈ.ಎಸ್.ಕುಮಾರ್, ಪುರಸಭೆ ಸದಸ್ಯ ಕೆ.ಪಿ.ಪ್ರಭುಶಂಕರ್ ಮತ್ತು ಅತಿಥಿ ಉಪನ್ಯಾಸಕ ಕೆ.ಎಲ್.ರಮೇಶ್ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net