ಎಂ.ಪರಮೇಶ್ವರ ನಾಯ್ಕರಿಗೆ ಅಭಿನಂದನೆ

New Project (60)
Published on

ಬದಿಯಡ್ಕ: ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿಗಳಿಗೆ ಅಮೂಲ್ಯ ಕೊಡುಗೆ ನೀಡಿದ ಹಿರಿಯ ಸಾಧಕರನ್ನು ಅವರ ಮನೆಯಂಗಳದಲ್ಲಿ ಗೌರವಿಸುವ ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ‘ಪರಿಷತ್ತಿನ ನಡಿಗೆ ಹಿರಿಯ ಸಾಧಕರ ಕಡೆಗೆ’ ಎಂಬ ಕಾರ್ಯಕ್ರಮದಂಗವಾಗಿ ಮಧುಪುರ ಗಣೇಶ ಭಜನಾವಳಿ, ಮಲ್ಲ ಶ್ರೀ ದುರ್ಗಾಮೃತ ಸೇರಿದಂತೆ ಹದಿಮೂರು ಭಜನಾ ಪುಸ್ತಕಗಳ ಕರ್ತೃ, ಪ್ರಸಿದ್ಧ ಭಜನಾ ಹಾಡುಗಾರ ಎಂ.ಪರಮೇಶ್ವರ ನಾಯ್ಕ ಅರ್ತಲ ಅವರನ್ನು ಕೊಲ್ಲಂಗಾನದ ಅರ್ತಲದಲ್ಲಿರುವ ನಿವಾಸದಲ್ಲಿ ಅಭಿನಂದಿಸಲಾಯಿತು.

ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕ ಅಧ್ಯಕ್ಷ ಡಾ.ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ ಪರಮೇಶ್ವರ ನಾಯ್ಕ, ಶಾಂತಾ ದಂಪತಿಯನ್ನು ಅಭಿನಂದಿಸಿದರು. ಕಾಸರಗೋಡು ಸರ್ಕಾರಿ ಕಾಲೇಜಿನ ನಿವೃತ್ತ ಉಪನ್ಯಾಸಕ ಪ್ರೋ.ಎ.ಶ್ರೀನಾಥ್ ಅಭಿನಂದನಾ ಭಾಷಣ ಮಾಡಿದರು. ಕಾಸರಗೋಡು ಸರ್ಕಾರಿ ಕಾಲೇಜಿನ ಉಪನ್ಯಾಸಕ ಡಾ.ರತ್ನಾಕರ ಮಲ್ಲಮೂಲೆ ಶುಭಹಾರೈಸಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಸಂಘಟನಾ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ ಸ್ವಾಗತಿಸಿ, ನಿರೂಪಿಸಿದರು. ಗೌರವ ಕಾರ್ಯದರ್ಶಿ ಪ್ರದೀಪ್ ಕುಮಾರ್ ಶೆಟ್ಟಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net