

ಮದ್ದೂರು: ಮನ್‌ಮುಲ್ ನಿರ್ದೇಶಕರಾಗಿ 2ನೇ ಬಾರಿಗೆ ಆಯ್ಕೆಯಾದ ಎಸ್.ಪಿ.ಸ್ವಾಮಿ ಅವರನ್ನು ಅಭಿಮಾನಿಗಳು ಪಟ್ಟಣದ ಪುರಾಣ ಪ್ರಸಿದ್ಧ ಶ್ರೀ ಮದ್ದೂರಮ್ಮ ದೇವಾಲಯದ ಆವರಣದಲ್ಲಿ ಭಾರಿ ಹೂವಿನ ಹಾರ ಹಾಕಿ ಅಭಿನಂದಿಸಿದರು.
ಸಮಾಜ ಸೇವಕ ಎಂ.ಯಶವಂತ್ ಮಾತನಾಡಿ, ಎಸ್.ಪಿ.ಸ್ವಾಮಿ ಅವರು ತಾಲೂಕಿನಾದ್ಯಂತ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನರಿಗೆ ಅನುಕೂಲ ಕಲ್ಪಿಸಿದ್ದಾರೆ. ಇದನ್ನು ಮೆಚ್ಚಿ 2ನೇ ಬಾರಿಗೆ ಮನ್‌ಮುಲ್ ನಿರ್ದೇಶಕರಾಗಿ ಆಯ್ಕೆ ಮಾಡಿರುವುದು ಸಂತೋಷ ತಂದಿದೆ ಎಂದರು.
ಮನ್‌ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ ಮಾತನಾಡಿ, ಹಾಲು ಉತ್ಪಾದಕರ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತೇನೆ ಹಾಗೂ ಮತ್ತಷ್ಟು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನರಿಗೆ ಅನುಕೂಲ ಕಲ್ಪಿಸುತ್ತೇನೆ ಎಂದು ಭರವಸೆ ನೀಡಿದರು.
ಮುಖಂಡರಾದ ಕುಂದನಕುಪ್ಪೆ ಕುಮಾರ್, ಅಭಿನಂದನ್, ಬಾಬು, ವೆಂಕಟೇಶ್ ಇತರರು ಇದ್ದರು.