ಎಂಎಲ್ಸಿ ಮಧು ಜಿ.ಮಾದೇಗೌಡಗೆ ಅಭಿನಂದನೆ

4KMD-1
ಚಿಕ್ಕರಸಿನಕೆರೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿ ಸವಿತಾ ಪ್ರಭುಸ್ವಾಮಿ ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಕೆ.ಎಂ.ದೊಡ್ಡಿಯ ಭಾರತೀ ವಿದ್ಯಾಸಂಸ್ಥೆಯ ಆಡಳಿತ ಕಚೇರಿಗೆ ಆಗಮಿಸಿ ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ಅವರನ್ನು ಅಭಿನಂದಿಸಿದರು.
Published on

ಕೆ.ಎಂ.ದೊಡ್ಡಿ: ಸಮೀಪದ ಚಿಕ್ಕರಸಿನಕೆರೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾದ ಸವಿತಾ ಪ್ರಭುಸ್ವಾಮಿ ಅವರು ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ಅವರನ್ನು ಅಭಿನಂದಿಸಿದರು.

ಭಾರತೀ ವಿದ್ಯಾಸಂಸ್ಥೆಯ ಆಡಳಿತ ಕಚೇರಿಯಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಮಧು ಜಿ.ಮಾದೇಗೌಡ, ಚಿಕ್ಕರಸಿನಕೆರೆ ಗ್ರಾಪಂ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಸವಿತಾ ಪ್ರಭುಸ್ವಾಮಿ ಅವರು ಎಲ್ಲ ಸದಸ್ಯರನ್ನೂ ವಿಶ್ವಾಸಕ್ಕೆ ತೆಗೆದು ಕೊಂಡು ಉತ್ತಮವಾಗಿ ಕೆಲಸ ನಿರ್ವಹಿಸಲಿ ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಗಳಿಗೆ ಮೂಲಸೌಕರ್ಯ ಕಲ್ಪಿಸಲು ಅಧ್ಯಕ್ಷರೊಟ್ಟಿಗೆ ಸೇರಿ ಅಭಿವೃದ್ಧಿಪಡಿಸಲು ಯೋಜನೆ ರೂಪಿಸಿ ಎಂದು ಕಿವಿಮಾತು ಹೇಳಿದರು.

ಸವಿತಾ ಪ್ರಭುಸ್ವಾಮಿ ಮಾತನಾಡಿ, ನನ್ನ ಮೇಲೆ ವಿಶ್ವಾಸವಿಟ್ಟು ಉಪಾಧ್ಯಕ್ಷರನ್ನಾಗಿ ಮಾಡಿದ ಎಂಎಲ್ಸಿ ಮಧು ಜಿ.ಮಾದೇಗೌಡ ಅವರಿಗೆ ನಾನು ಚಿರಋಣಿಯಾಗಿದ್ದು, ಗ್ರಾಪಂ ಅಧ್ಯಕ್ಷರೊಡಗೂಡಿ ಎಲ್ಲ ಸದಸ್ಯರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಮೂಲಸೌಕರ್ಯ ಕಲ್ಪಿಸಲು ಆದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿದರು.

ಭಾರತೀ ವಿದ್ಯಾಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆಶಯ್ ಮಧು, ತಾ.ಪಂ. ಮಾಜಿ ಸದಸ್ಯ ಭರತೇಶ್, ಗ್ರಾ.ಪಂ. ಅಧ್ಯಕ್ಷೆ ಕಮಲಮ್ಮ ಬೋರೇಗೌಡ, ಸದಸ್ಯರಾದ ರಂಜಿನಿ ಭರತೇಶ್, ಮಣಿಲ ವೆಂಕಟಸ್ವಾಮಿ, ಗೌರಮ್ಮ ರಾಜು, ರಮೇಶ್, ಸುಂದರ್, ಕುಮಾರ್, ಸವಿತಾ ಚಿಕ್ಕಬೋರಯ್ಯ, ಮುಖಂಡರಾದ ಕೆ. ಕಬ್ಬಾಳಯ್ಯ. ಮುಡೀನಹಳ್ಳಿ ಅಪ್ಪಾಜಿ, ಭಾನುಪ್ರಕಾಶ್, ಸಿ.ಕೆ. ಮಹದೇವು, ವಿಜಯ್, ಶಿವಲಿಂಗೇಗೌಡ, ಚಿಕ್ಕಬೋರಯ್ಯ ಸೇರಿದಂತೆ ಮತ್ತಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net