ಪ್ರೊ.ಮುಜಾಫರ್ ಅಸ್ಸಾದಿ ಹಾಗೂ ಪ್ರೊ.ಜಿ.ಟಿ.ರಾಮಚಂದ್ರಪ್ಪಗೆ ಅಭಿನಂದನೆ

44
Published on

ಮಾನಸಗಂಗೋತ್ರಿ ಮಾನವಿಕ ಸಭಾಂಗಣದಲ್ಲಿ ರಾಜ್ಯಶಾಸ್ತ್ರ ಅಧ್ಯಯನ ವಿಭಾಗ, ಸಾರ್ವಜನಿಕ ಆಡಳಿತ ಅಧ್ಯಯನ ವಿಭಾಗದ ವತಿಯಿಂದ ಬುಧವಾರ ಆಯೋಜಿಸಿದ್ದ ಪ್ರೊ.ಮುಜಾಫರ್ ಅಸ್ಸಾದಿ ಮತ್ತು ಪ್ರೊ.ಜಿ.ಟಿ.ರಾಮಚಂದ್ರಪ್ಪ ಅವರ ನಿವೃತ್ತಿಯ ಗೌರವಾರ್ಥ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ ಹಾಗೂ ಅಭಿನಂದನಾ ಗ್ರಂಥಗಳ ಬಿಡುಗಡೆ ಹಾಗೂ ಅಭಿನಂದನಾ ಸಮಾರಂಭ ನೆರವೇರಿತು.

ಮಾಜಿ ಸಚಿವ ಪ್ರೊ.ಬಿ.ಕೆ.ಚಂದ್ರಶೇಖರ್ ಕಾರ್ಯಕ್ರಮ ಉದ್ಘಾಟಿಸಿದರು. ‘ಸ್ಮತಿ’ ಹಾಗೂ ‘ಸ್ನೇಹಾದ್ರಿ’ ಅಭಿನಂದನಾ ಗ್ರಂಥಗಳನ್ನು ಬಿಡುಗಡೆ ಮಾಡಲಾಯಿತು. ಪ್ರೊ.ಮುಜಾಫರ್ ಅಸ್ಸಾದಿ ಮತ್ತು ಪ್ರೊ.ಜಿ.ಟಿ.ರಾಮಚಂದ್ರಪ್ಪ ಅವರನ್ನು ಅಭಿನಂದಿಸಲಾಯಿತು.

ಹಿರಿಯ ವಕೀಲ ಡಾ.ಅದಿತ್ಯ ಸೊಂಧಿ, ಸಾಹಿತಿ ಡಾ.ಬಂಜಗೆರೆ ಜಯಪ್ರಕಾಶ್, ನಿವೃತ್ತ ಪ್ರಾಧ್ಯಾಪಕ ಪ್ರೊ.ಎಚ್.ಎಂ.ರಾಜಶೇಖರ್, ಪ್ರೊ.ಕೃಷ್ಣ ಹೊಂಬಾಳೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net