ರಾಜೇಂದ್ರ ಚಿಲಿಂಬಿಗೆ ಅಭಿನಂದನೆ

9
Published on

ಪುತ್ತೂರು ಗ್ರಾಮಾಂತರ: ದೇಯಿ ಬೈದ್ಯೆತಿ, ಕೋಟಿ-ಚೆನ್ನಯರ ಮೂಲಸ್ಥಾನ ಕ್ಷೇತ್ರವಾದ ಗೆಜ್ಜೆಗಿರಿಯ ಅಭಿವೃದ್ಧಿಯ ವಿಚಾರದಲ್ಲಿ ಬುಧವಾರ ಕ್ಷೇತ್ರಾಡಳಿತ ಸಮಿತಿ ಸಭೆ ನಡೆಯಿತು. ಗೆಜ್ಜೆಗಿರಿ ಕ್ಷೇತ್ರದ ಮಾಧ್ಯಮ ವಕ್ತಾರ ರಾಜೇಂದ್ರ ಚಿಲಿಂಬಿ ಕದ್ರಿ ಮಂಜುನಾಥೇಶ್ವರ ಕ್ಷೇತ್ರದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿ ಆಯ್ಕೆಗೊಂಡಿರುವ ಹಿನ್ನೆಲೆಯಲ್ಲಿ ಅವರನ್ನು ಅಭಿನಂದಿಸಲಾಯಿತು.

ಗೆಜ್ಜೆಗಿರಿ ಕ್ಷೇತ್ರದ ಮಾಧ್ಯಮ ವಕ್ತಾರ ರಾಜೇಂದ್ರ ಚಿಲಿಂಬಿ ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರಕ್ಕೆ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಕರ್ನಾಟಕ ಧಾರ್ಮಿಕ ಪರಿಷತ್ ಅವರನ್ನು ಕದ್ರಿ ಮಂಜುನಾಥೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರನ್ನಾಗಿ ಆಯ್ಕೆ ಮಾಡಿರುವುದು ಸಂತಸದ ವಿಚಾರವಾಗಿದೆ ಎಂದು ಕ್ಷೇತ್ರಾಡಳಿತ ಸಮಿತಿಯವರು ಸಂತಸ ವ್ಯಕ್ತಪಡಿಸಿದರು.

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಗೌರವಾಧ್ಯಕ್ಷರಾದ ಪೀತಾಂಬರ ಹೆರಾಜೆ, ರಾಜಶೇಖರ್ ಕೋಟ್ಯಾನ್,ಉಪಾಧ್ಯಕ್ಷ ಉಲ್ಲಾಸ್ ಕೋಟ್ಯಾನ್, ಪ್ರಮುಖರಾದ ಶೈಲೇಂದ್ರ ವೈ ಸುವರ್ಣ, ಚಂದ್ರಶೇಖರ್ ಉಚ್ಚಿಲ, ನವೀನ್ ಸುವರ್ಣ, ಹರೀಶ್ ಕೆ.ಪೂಜಾರಿ ಮತ್ತಿತರರು ಇದ್ದರು.

Related Stories

No stories found.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net