ರಾಷ್ಟ್ರ ಮಟ್ಟದಲ್ಲಿ ಪ್ರಶಸ್ತಿ ಪಡೆದ ಕ್ರೀಡಾಪಟುಗಳಿಗೆ ಅಭಿನಂದನೆ

7KMD-02
31ನೇ ಜೂನಿಯರ್‌ಮತ್ತು ಸೀನಿಯರ್ ರಾಷ್ಟ್ರ ಮಟ್ಟದ ಥ್ರೋಬಾಲ್ ಪಂದ್ಯಾವಳಿಯಲ್ಲಿ ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದ ಕ್ರೀಡಾಪಟುಗಳನ್ನು ವಿಧಾನ ಪರಿಷತ್ ಸದಸ್ಯ ಭಾರತೀ ಎಜುಕೇಷನ್ ಟ್ರಸ್ಟ್‌ನ ಚೇರ್ಮನ್ ಮಧು ಜಿ.ಮಾದೇಗೌಡ ಅಭಿನಂದಿಸಿದರು.
Published on

ಕೆ.ಎಂ.ದೊಡ್ಡಿ: ವಿದ್ಯಾರ್ಥಿಗಳು ಪಠ್ಯದ ಜತೆಗೆ ಕ್ರೀಡೆಯಲ್ಲೂ ಮುಂದಿದ್ದಾರೆ ಎಂಬುದಕ್ಕೆ ಕ್ರೀಡೆಗಳಲ್ಲಿ ಸಮಗ್ರ ಪ್ರಶಸ್ತಿ ಲಭಿಸುತ್ತಿರುವುದೇ ಕಾರಣ ಎಂದು ವಿಧಾನ ಪರಿಷತ್ ಸದಸ್ಯ, ಭಾರತೀ ಎಜುಕೇಷನ್ ಟ್ರಸ್ಟ್‌ನ ಚೇರ್ಮನ್ ಮಧು ಜಿ.ಮಾದೇಗೌಡ ತಿಳಿಸಿದರು.

31 ನೇ ಜೂನಿಯರ್ ಮತ್ತು ಸೀನಿಯರ್ ರಾಷ್ಟ್ರ ಮಟ್ಟದ ಥ್ರೋಬಾಲ್ ಪಂದ್ಯಾವಳಿಯಲ್ಲಿ ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದ ಕ್ರೀಡಾಪಟುಗಳಿಗೆ ಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ ಸಮಾರಂಭದಲ್ಲಿ ಅಭಿನಂದಿಸಿ ಮಾತನಾಡಿದ ಅವರು, ಪ್ರತಿಭಾವಂತರನ್ನು ಪ್ರೋತ್ಸಾಹಿಸುವುದು ನಮ್ಮ ಕೆಲಸವಾಗಿದೆ. ಹಾಗಾಗಿ ಕೀಡಾಪಟುಗಳನ್ನು ಅಭಿನಂದಿಸುತ್ತಿದ್ದೇವೆ ಎಂದರು.

ಕ್ರೀಡಾಪಟುಗಳಾದ ಎನ್.ಎಸ್.ಹರ್ಷಿತಾ, ಟಿ.ಎಸ್. ಶ್ರೇಯಾ, ಕಿಶನ್, ಲೇಖನಾ, ರಿಷಿ, ಹೃತ್ವಿಕ್, ರೃತಿಕ್ ಅವರನ್ನು ಭಾರತೀ ಎಜುಕೇಷನ್ ಟ್ರಸ್ಟ್‌ನ ಕಾರ್ಯದರ್ಶಿ ಬಿ.ಎಂ.ನಂಜೇಗೌಡ, ಭಾರತೀ ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸಿ.ವಿ. ಮಲ್ಲಿಕಾರ್ಜುನ್, ಆಂಗ್ಲ ಮಾಧ್ಯಮ ಶಾಲೆ ಮುಖ್ಯ ಶಿಕ್ಷಕ ಎಚ್.ಪಿ.ಪ್ರತಿಮಾ, ದೈಹಿಕ ಶಿಕ್ಷಣ ನಿರ್ದೇಶಕ ಶಂಕರ್, ಬಸವರಾಜು ಅಭಿನಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net